ಬೆಂಗಳೂರು: ಬೀದರ್ ಜಿಲ್ಲೆಯ ಬಸವಕಲ್ಯಾಣದ ಮನ್ನಳ್ಳಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸ್ತಿದ್ದ 40 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಸೀರೆ ಜಪ್ತಿ ಮಾಡಲಾಗಿದೆ. ಗುಜರಾತ್‌ನಿಂದ ಬೀದರ್‌ಗೆ ಅಕ್ರಮವಾಗಿ ಸೀರೆ ಸಾಗಿಸುತ್ತಿದ್ದರೆಂಬ ಮಾಹಿತಿ ಲಭ್ಯವಾಗಿದೆ.
ಇನ್ನು, ಬಾಗಲಕೋಟೆಯ ನಾಯನೇಗಲಿ ಚೆಕ್ಪೋಸ್ಟ್ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 14.88 ಲಕ್ಷ ರೂ. ಹಣವನ್ನ ಜಪ್ತಿ ಮಾಡಲಾಗಿದೆ. ತಮಿಳುನಾಡು ಮೂಲದ ಲಾರಿಯಲ್ಲಿದ್ದ ಹಣವನ್ನು, ಬಾಗಲಕೋಟೆ ಗ್ರಾಮಾಂತರ ಪೊಲೀಸರು ಮತ್ತು ಫ್ಲೈಯಿಂಗ್ ಸ್ಕ್ವಾಡ್ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದೆ.
ಬಸ್ನಲ್ಲಿ ಸಾಗಿಸುತ್ತಿದ್ದ 30 ಲಕ್ಷ ಹಣ ವಶಕ್ಕೆ…
ಕರ್ನಾಟಕ ಗಡಿಗೆ ಹೊಂದಿರುವ ತಮಿಳುನಾಡಿನ ಜೂಜುವಾಡಿ ಚೆಕ್‌ಪೋಸ್ಟ್‌ನಲ್ಲಿ 30.5 ಲಕ್ಷ ಹಣವನ್ನ ಸೀಜ್ ಮಾಡಿದ್ದಾರೆ. ಖಾಸಗಿ ಬಸ್ನಲ್ಲಿ 30.5 ಲಕ್ಷ ಹಣ, 500 ಗ್ರಾಮ್ ಚಿನ್ನಾಭರಣವನ್ನ ರಾಜ್ಕುಮಾರ್ ಎಂಬಾತ ಸಾಗಿಸ್ತಿದ್ದ. ಆದ್ರೆ, ಸೂಕ್ತ ದಾಖಲೆ ಇಲ್ಲದೆ ಇದ್ದಿದ್ರಿಂದ ಹಣವನ್ನ ವಶಕ್ಕೆ ಪಡೆಯಲಾಗಿದೆ.
ಲೋಕಸಭಾ ಚುನಾವಣೆ ವೇಳೆ ಅಧಿಕಾರಿಗಳು ಭರ್ಜರಿ ಬೇಟೆ ಆಡ್ತಿದ್ದಾರೆ. ದಾಖಲೆ ಇಲ್ಲದೆ ಸಾಗಿಸ್ತಿದ್ದ ಹಣ, ಚಿನ್ನ, ಬೆಲೆಬಾಳುವ ವಸ್ತುಗಳನ್ನು ಸೀಜ್ ಮಾಡ್ತಿದ್ದಾರೆ.