ಬೆಂಗಳೂರು: ನಿನ್ನೆ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದ ಕನ್ನಡದ ಖ್ಯಾತ ನಟ-ನಿರ್ಮಾಪಕ-ನಿರ್ದೇಶಕ ದ್ವಾರಕೀಶ್ ಅವರ ಅಂತಿಮ ವಿಧಿವಿಧಾನ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ರುದ್ರಭೂಮಿಯಲ್ಲಿ ನಡೆದಿದೆ.
ಬ್ರಾಹ್ಮಣ ಸಂಪ್ರದಾಯದಂತೆ ವಿಧಿ ವಿಧಾನವನ್ನು ನಡೆಸಲಾಗಿದೆ. ದ್ವಾರಕೀಶ್ ಅವರ ಹಿರಿಯ ಮಗ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಈ ವೇಳೆ ಕುಟುಂಬದವರು ಹಾಗೂ ಆಪ್ತರು ಹಾಜರಿದ್ದರು. ಅಂತಿಮ ಸಂಸ್ಕಾರಕ್ಕೂ ಮೊದಲು ಪೊಲೀಸರು ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವವಂದನೆ ನೀಡಲಾಗಿದೆ.
ದ್ವಾರಕೀಶ್ ಅವರು ಚಿತ್ರರಂಗದಲ್ಲಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದರು. ನಟನಾಗಿ, ನಿರ್ಮಾಪಕನಾಗಿ ಹಾಗೂ ನಿರ್ದೇಶಕನಾಗಿ ಅವರು ಹೆಸರು ಮಾಡಿದ್ದರು. ಅವರನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಸಾಕಷ್ಟು ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ. ಸಾಕಷ್ಟು ಜನರನ್ನು ಕನ್ನಡಯ ಚಿತ್ರರಂಗಕ್ಕೆ ಪರಿಚಯಿಸಿದ ಖ್ಯಾತಿ ಅವರಿಗೆ ಇದೆ.