Important: ಕಾಶ್ಮೀರದಲ್ಲಿ ಮೃತಪಟ್ಟವರ ಕುಟಂಬಕ್ಕೆ 10 ಲಕ್ಷ ಪರಿಹಾರ ಘೋಷಣೆ

Share It

ಬೆಂಗಳೂರು: ಜಮ್ಮುಕಾಶ್ಮೀರದ ಪಹಲ್ಗಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ ಹತ್ತು ಲಕ್ಷ ರೂ.ಗಳ ಪರಿಹಾರ ಘೋಷಣೆ ಮಾಡಿದ್ದಾರೆ.‌

ಉಗ್ರರ ದಾಳಿಯಲ್ಲಿ ರಾಜ್ಯದ ಇಬ್ಬರು ಸಾವನ್ನಪ್ಪಿದ್ದು, ಶಿವಮೊಗ್ಗದ ಮಂಜುನಾಥ್ ರಾವ್ ಮತ್ತು ಭರತ್ ಭೂಷಣ್ ಮೃತಪಟ್ಟಿದ್ದಾರೆ. ಅವರ ಪಾರ್ಥಿವ ಶರೀರವನ್ನು ತರಲು ಸರಕಾರ ಈಗಾಗಲೇ ಎಲ್ಲ ವ್ಯವಸ್ಥೆ ಮಾಡಿದೆ.  ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಕಾಶ್ಮೀರದಲ್ಲಿ ಇರುವ ಪ್ರವಾಸಿಗರ ರಕ್ಷಣೆಯ ವ್ಯವಸ್ಥೆ ಮಾಡಲಾಗಿದೆ.

ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ 8 ಗಂಟೆಗೆ ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಲಿದ್ದಾರೆ.


Share It

You May Have Missed

You cannot copy content of this page