ಕೋಲಾರ: ನಿಲ್ಲಿಸಿದ್ದ ಕಾರಿನ ಗಾಜು ಹೊಡೆದು 1.60 ಲಕ್ಷ ಹಣವನ್ನು ದರೋಡೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ನಡೆದಿದೆ.
ಶ್ರೀನಿವಾಸಪುರ ಪಟ್ಟಣದ ಬಸ್ ಡಿಪೋ ಮುಂಭಾಗದಲ್ಲಿ ನಿಲ್ಲಿಸಿದ್ದ ಕಾರಿನ ಗಾಜು ಹೊಡೆದು ಹಣ ಎತ್ತಿಕೊಂಡು ಪರಾರಿಯಾಗಿದ್ದಾರೆ. ಕಾರಿನ ಗಾಜನ್ನು ಪುಡಿಪುಡಿ ಮಾಡಿದ್ದು, ಕಿಟಿಕಿಯ ಮೂಲಕ ಹಣದ ಬ್ಯಾಗ್ ಅನ್ನು ಎತ್ತಿಕೊಂಡು ಪರಾರಿಯಾಗಿದ್ದಾರೆ.
ಗೋಪಾಲಕೃಷ್ಣ ಎಂಬುವವರಿಗೆ ಸೇರಿದ ಕಾರಾಗಿದ್ದು, ಅವರು ಫ್ಲೈವುಡ್ ಡಿಸ್ಟ್ರಿಬ್ಯೂಟರ್ ಆಗಿದ್ದಾರೆ. ಅವರು ಪಟ್ಟಣದ ವಿವಿಧ ಅಂಗಡಿಗಳಲ್ಲಿ ಕಲೆಕ್ಷನ್ ಮಾಡಿದ್ದ ಹಣವನ್ನು ಬ್ಯಾಗ್‌ನಲ್ಲಿಟ್ಟು, ಕಲೆಕ್ಷನ್‌ಗಾಗಿ ಮತ್ತೊಂದು ಅಂಗಡಿಗೆ ತೆರಳಿದ್ದರು ಎನ್ನಲಾಗಿದೆ.
ಗೋಪಾಲಕೃಷ್ಣ ಅವರ ಕಲೆಕ್ಷನ್ ವ್ಯವಹಾರ ಗೊತ್ತಿದ್ದವರೇ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದ್ದು, ಶ್ರೀನಿವಾಸಪುಟ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು, ಆರೋಪಿಗಳಿಗಾಗಿ ಶೋಧ ಆರಂಭಿಸಿದ್ದು, ಅಕ್ಕಪಕ್ಕದ ಅಂಗಡಿಗಳ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಲು ಮುಂದಾಗಿದ್ದಾರೆ.