ಫ್ರಾನ್ಸ್ ದೇಶದ ರಾಜಧಾನಿ ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಚೊಚ್ಚಲ ಪದಕ ಪ್ರಾಪ್ತಿಯಾಗಿದೆ.
ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಶೂಟಿಂಗ್ ನಲ್ಲಿ ಭಾರತದ ಮನು ಭಾಕರ್ ಅವರು 221.7 ಗುರಿ ಸಾಧಿಸುವ ಮೂಲಕ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.
ಕೊರಿಯಾ ದೇಶದ ಮಹಿಳಾ ಶೂಟರ್ ಗಳು ಪ್ರಥಮ ಮತ್ತು ದ್ವಿತೀಯ ಸ್ಥಾನಗಳನ್ನು ಪಡೆದು ಚಿನ್ನದ ಪದಕ ಮತ್ತು ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ.
ಭಾರತದ ಮಹಿಳಾ ಶೂಟರ್ ಮನು ಭಾಕರ್ ಅವರು ದೇಶಕ್ಕೆ ಮೊದಲ ಪದಕ ಗೆದ್ದುಕೊಟ್ಟ ಕೀರ್ತಿಗೆ ಪಾತ್ರರಾಗಿದ್ದಾರೆ.