ಅಮೆರಿಕದ ಅಧ್ಯಕ್ಷೀಯ ಚುನಾವಣಾ ಸ್ಪರ್ಧೆಯಿಂದ ಜೋ ಬಿಡೈನ್ ಅಧಿಕೃತವಾಗಿ ಹಿಂದೆ ಸರಿದಿದ್ದು, ಭಾರತೀಯ ಮೂಲದ ಕಮಲಾ ಹ್ಯಾರಿಸ್ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಜೋ ಬಿಡೈನ್ ಸತತ ಎರಡನೇ ಬಾರಿ ಆಯ್ಕೆ ಬಯಸಿ ಸ್ಪರ್ಧೆಗೆ ಇಳಿದಿದ್ದರು. ವ್ಯಾಪಕ ವಿರೋಧದ ಹಿನ್ನೆಲೆಯಲ್ಲಿ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು’ಹಾಲಿ ಆಡಳಿತ ನಡೆಸುತ್ತಿರುವ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದ್ದು, ಹಾಲಿ ಅಧ್ಯಕ್ಷ ಜೋ ಬಿಡೈನ್ ತಮ್ಮ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದಾರೆ.
ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2ನೇ ಬಾರಿ ಅಮೆರಿಕಾ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದು, ಡೆಮಾಕ್ರೆಟಿಕ್ ಪಾರ್ಟಿಯಿಂದ ಸೂಕ್ತ ಅಭ್ಯರ್ಥಿ ಇಲ್ಲದ ಮತ್ತೆ 2ನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ.
ಆದರೆ ಚೆನೈ ಮೂಲದ ಕಮಲಾ ಹ್ಯಾರಿಸ್ ಅವರು ಈ ಬಾರಿ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಚುನಾವಣೆಯನ್ನು ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲ್ಲುವ ಫೇವರಿಟ್ ಆಗಿ ಹೊರಹೊಮ್ಮಿದ್ದಾರೆ. ಇಡ್ಲಿ ಪ್ರಿಯೆ ಕಮಲಾ ಹ್ಯಾರಿಸ್ ಅವರು ಕಳೆದ ಬಾರಿ ಅಮೆರಿಕಾ ಉಪಾಧ್ಯಕ್ಷೆಯಾದಾಗ ತವರು ದೇಶ ಭಾರತಕ್ಕೆ ಬಂದು ಚೆನ್ನೈ ನಗರಕ್ಕೆ ಭೇಟಿ ನೀಡಿ ಅವರಿಗೆ ಇಷ್ಟವಾದ ಇಡ್ಲಿ-ಸಾಂಬಾರು ಸವಿದು ಸಂಭ್ರಮಿಸಿದ್ದರು. ಈ ಬಾರಿ ನೇರವಾಗಿ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತಿರುವ ಕಾರಣ ಕಮಲಾ ಹ್ಯಾರಿಸ್ ಅವರಿಗೆ ಈ ಬಾರಿ ಭಾರತೀಯ ಮೂಲದ ಮತದಾರರು ಸಂಪೂರ್ಣವಾಗಿ ಬೆಂಬಲಿಸುವ ಸಾಧ್ಯತೆ ನಿಚ್ಚಳವಾಗಿದೆ.