ಸಿ.ಎಂ.ಸಿದ್ದರಾಮಯ್ಯ ಮನವಿ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಭಯಾನಕ ಬಿಜೆಪಿ ವಿರೋಧಿ ಅಲೆ ಇದೆ: ಸಿ.ಎಂ
ಬೆಂಗಳೂರು : ಸೌಮ್ಯರೆಡ್ಡಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ನೂರಕ್ಕೆ ನೂರು ಗೆಲ್ಲುತ್ತಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಖಚಿತ ಮಾತುಗಳನ್ನಾಡಿದರು.
ಬೊಮ್ಮನಹಳ್ಳಿಯಲ್ಲಿ ನಡೆಯುತ್ತಿರುವ ಭರ್ಜರಿ ರೋಡ್ ಶೋದಲ್ಲಿ ಹತ್ತು ಸಾವಿರಕ್ಕೂ ಅಧಿಕ ಜನಸಮುದಾಯದ ಸಮ್ಮುಖದಲ್ಲಿ ಈ ಬಾರಿ ಸಂಸದ ತೇಜಸ್ವಿ ಸೂರ್ಯನಿಗೆ ಸೋಲಾಗುತ್ತದೆ ಎಂದರು.
ವಿಧಾನಸಭೆ ಚುನಾವಣೆಯಲ್ಲಿ ಸೌಮ್ಯರೆಡ್ಡಿಗೆ ಅನ್ಯಾಯವಾಗಿದೆ: ತೇಜಸ್ವಿಸೂರ್ಯನನ್ನು ಸೋಲಿಸಿ ಸೌಮ್ಯರೆಡ್ಡಿಗೆ ನ್ಯಾಯ ಕೊಡಿ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಮನವಿ ಮಾಡಿದರು.
ಪದ್ಮನಾಭನಗರ ಮತ್ತು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಗಳಲ್ಲಿ ವ್ಯಕ್ತವಾದ ಭರ್ಜರಿ ಜನ ಬೆಂಬಲಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಭಯಾನಕ ಬಿಜೆಪಿ ವಿರೋಧಿ ಅಲೆ ಇದೆ. ಸೌಮ್ಯರೆಡ್ಡಿ ಭಾರೀ ಅಂತರದಲ್ಲಿ ಗೆಲ್ಲುತ್ತಾರೆ. ಈ ಮಾತನ್ನು ನಾನು ಸುಮ್ಮನೆ ಹೇಳುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.