ಕಲಬುರಗಿ: ಕಲಬುರಗಿಯ ಬಿದ್ದಾಪುರ ಕಾಲೋನಿ ಬಳಿಯ ರೈಲು ಹಳಿಯ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ಶವ ಪತ್ತೆಯಾಗಿದ್ದು, ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ.
ಪೊಲೀಸ್ ಇಲಾಖೆಯ ವೈರ್‌ಲೆಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಇನ್ಸ್ಪೆಕ್ಟರ್ ಬಾಪುಗೌಡ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದು, ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.
ಬಾಪುಗೌಡ ಕ್ಯಾನ್ಸರ್‌ನಿಂದ ಬಳಸುತ್ತಿದ್ದು, ಇದೇ ಕಾರಣಕ್ಕೆ ಮಾನಸಿಕವಾಗಿ ನೊಂದಿದ್ದರು. ಹೀಗಾಗಿ, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಶವವನ್ನು ಕಲಬುರಗಿ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.