ಅಪರಾಧ ಸುದ್ದಿ

ಐಪಿಎಲ್ ಟಿಕೆಟ್ ಮಾರಾಟ ದಂಧೆ: ಇಬ್ಬರು ಪೊಲೀಸರು ಸಸ್ಪೆಂಡ್

Share It

ಬೆಂಗಳೂರು: ಐಪಿಎಲ್ ಟಿಕೆಟ್ ಮಾರಾಟ ದಂಧೆಯಲ್ಲಿ ಸಿಕ್ಕಿಬಿದ್ದಿದ್ದ ಇಬ್ಬರು ಪೊಲೀಸರನ್ನು ಸಸ್ಪೆಂಡ್ ಮಾಡಿ ಸಂಚಾರ ವಿಭಾಗದ ಪೊಲೀಸ್ ಆಯುಕ್ತ ಅನುಚೇತ್ ಆದೇಶ ಮಾಡಿದ್ದಾರೆ.

ಹಲಸೂರು ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ರವಿಚಂದ್ರ ಹಾಗೂ ಟಿಎಂಸಿ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಈ ಇಬ್ಬರ ವಿರುದ್ಧ ಗೋವಿಂದರಾಜ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಗೂ ಪೊಲೀಸು ನೊಟೀಸ್ ನೀಡಿದ್ದರು. ಈ ಇಬ್ಬರು ಕೆಕೆಆರ್ ಮತ್ತು ಆರ್‌ಸಿಬಿ ನಡುವಿನ ಪಂದ್ಯದ ವೇಳೆ ವಿಜಯನಗರ ಪಾರ್ಕ್ ಬಳಿ ಐಪಿಎಲ್ ಟಿಕೆಟ್ ಮಾರಾಟ ಮಾಡುತ್ತಿದ್ದು, ಪೊಲೀಸರಿಗೆ ಸಿಕ್ಕಿಬಿದ್ದಿದ್ದರು.


Share It

You cannot copy content of this page