ಬೆಂಗಳೂರು: ಶಾಸಕ ಶ್ಯಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ರಾಷ್ಟ್ರೀಯ ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಈಶ್ವರ್ ಖಂಡ್ರೆ ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಮಹಾಸಭಾದ ಕೇಂದ್ರ ಕಚೇರಿಯಲ್ಲಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ಶ್ಯಾಮನೂರು ಶಿವಶಂಕರಪ್ಪ ಅವರ ಸ್ಥಾನದಲ್ಲಿ ಅವರು ಮುಂದುವರಿಯಲಿದ್ದಾರೆ.
ಪ್ರಸ್ತುತ ಈಶ್ವರ್ ಖಂಡ್ರೆ ಅವರು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಇದೀಗ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

