ಸುದ್ದಿ

ಡಿ.ಕೆ.ಸುರೇಶ್ ಆಪ್ತರ ಮೇಲೆ ಐಟಿ ದಾಳಿ: ಬೆಂಬಲಿಗರ ಪ್ರತಿಭಟನೆ

Share It

ಬೆಂಗಳೂರು, ಏ.24: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್​ ಆಪ್ತ ಹಾಗೂ ಕೋಣನಕುಂಟೆ ಬ್ಲಾಕ್ ಮಾಜಿ ಕಾರ್ಪೊರೇಟರ್ ಗಂಗಾಧರ್ ಎಂಬುವವರ​ ಮನೆ ಸೇರಿದಂತೆ ಒಟ್ಟು 6 ಕಡೆಗಳಲ್ಲಿ ಇಂದು(ಏ.24) ಬೆಳಿಗ್ಗೆ 8 ರಿಂದ 10 ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಸತತ 8 ಗಂಟೆಯಿಂದ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ಇನ್ನು ಈ ಕುರಿತು ವಿಷಯ ತಿಳಿಯುತ್ತಿದ್ದಂತೆ ಮಾಜಿ ಕಾರ್ಪೊರೇಟರ್ ಗಂಗಾಧರ್ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿ ಧರಣಿ ನಡೆಸಿದ್ದಾರೆ. ಜೊತೆಗೆ ಡಿ.ಕೆ ಸುರೇಶ್ ಅವರನ್ನು ಟಾರ್ಗೆಟ್ ಮಾಡಿ ಅವರ ಆಪ್ತರ ಮೇಲೆ ಐಟಿ ದಾಳಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ.

ಇನ್ನು ಡಿ.ಕೆ ಸುರೇಶ್​ ಆಪ್ತರ ಮೇಲೆ ಹಲವು ಐಟಿ ದಾಳಿಗಳು ಆಗಿದ್ದು, ಕಾಂಗ್ರೆಸ್ ಮುಖಂಡ ಗಂಗಾಧರ್ ಜೊತೆ ಗೊಟ್ಟಿಗೆರೆ ಬ್ಲ್ಯಾಕ್ ಕಾಂಗ್ರೆಸ್ ‌ಅಧ್ಯಕ್ಷ ಶ್ರೀಧರ್, ಡಿ.ಕೆ ಸುರೇಶ್ ಆಪ್ತ ಸಹಾಯಕ ಸುಜಯ್, ಚಂದ್ರು, ಲಕ್ಷ್ಮಣ್, ಬಾಬು ಸೇರಿ ಹಲವಾರು ಜನರ ಮೇಲೆ ಐಟಿ ದಾಳಿ ನಡೆದಿದೆ. ಈ ಹಿನ್ನಲೆ ಕೋಣನಕುಂಟೆ, ಅಂಜಾನಪುರ ಹಾಗೂ ಅವಲಹಳ್ಳಿ ಭಾಗದಲ್ಲಿ ಬೆಳಿಗ್ಗೆಯಿಂದ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಹೆದ್ದಾರಿಯಲ್ಲಿ ಗೂಡ್ಸ್ ವಾಹನಗಳು, ಸಾರಿಗೆ ಬಸ್, ಕಾರು, ಸೇರಿದಂತೆ ಸಂಚಾರ ಮಾಡುವ ಪ್ರತಿಯೊಂದು ವಾಹನಗಳನ್ನು ಎಸ್.ಎಸ್.ಟಿ ಮತ್ತು ಪೊಲೀಸರು ಸರ್ಚಿಂಗ್ ಮಾಡುತ್ತಿದೆ.

ಇನ್ನು ಈ ಮಧ್ಯೆ ನೆಲಮಂಗಲ ಡಿವೈಎಸ್ಪಿ ಜಗದೀಶ್ ಮಾತನಾಡಿ, ‘ಚುನಾವಣೆ ಕರ್ತವ್ಯ ನಿರ್ವಹಣೆ ಬಗ್ಗೆ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾರೆ. ‘ಯಾವುದೇ ಪ್ರಭಾವಕ್ಕೆ ಒಳಗಾಗದೆ ನಿಷ್ಪಕ್ಷಪಾತವಾಗಿ ಮತದಾನ ನಡೆಸಲು ಅನುವು ಮಾಡಿಕೊಡಲು ಹಾಗೂ ಕಾನೂನುಬಾಹಿರ ವ್ಯಕ್ತಿಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆಯೂ ಸೂಚನೆ, ಮತ ಚಲಾಯಿಸುವ ವೇಳೆ ಅಡ್ಡಿ ಆತಂಕಗಳು ಒಳಗಾಗುವ ಸಾಧ್ಯತೆ ಕಂಡುಬಂದ್ರೆ ಕೂಡಲೇ ಹಿರಿಯ ಅಧಿಕಾರಿಗಳ ಗಮನಕ್ಕೆ ತರುವಂತೆ ಸೂಚಿಸಿದ್ದಾರೆ.


Share It

You cannot copy content of this page