ರಾಜಕೀಯ ಸುದ್ದಿ

ರಾಮನಗರದಲ್ಲಿ ಮತ್ತೋರ್ವ ಕಾಂಗ್ರೆಸ್ ಮುಖಂಡನಿಗೆ ಐಟಿ ಶಾಕ್

Share It

ರಾಮನಗರ, (ಏಪ್ರಿಲ್ 16): ಕಳೆದ ಒಂದು ವಾರದಿಂದ ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳಲ್ಲಿ ಐಟಿ ಅಧಿಕಾರಿಗಳು ಕಾರ್ಯಚರಣೆ ನಡೆಸಿದ್ದಾರೆ. ಇಂದು (ಏಪ್ರಿಲ್ 16) ಮಧ್ಯಾಹ್ನ ಬೆಂಗಳೂರು, ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ, ಕಾಂಗ್ರೆಸ್ ಮುಖಂಡನ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಮುಖಂಡ ವಿಜಯ್ ದೇವ್ ರೆಸಾರ್ಟ್ ‌ಮೇಲೆ ಐಟಿ ದಾಳಿಯಾಗಿದೆ. ರಾಮನಗರ ಜಿಲ್ಲೆಯ ಕನಕಪುರ‌ ತಾಲೂಕಿನ‌ ‌ಮರಳೇಬೇಕುಪ್ಪೆ ಗ್ರಾಮದಲ್ಲಿರುವ ತಪ್ಪಲು ಕಾಂಗ್ರೆಸ್ ಮುಖಂಡ ವಿಜಯ್ ದೇವ್ ಮಾಲೀಕತ್ವದ ರೆಸಾರ್ಟ್​ ಮೇಲೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಆಪ್ತರ ಬಳಗದಲ್ಲಿ ಗುರುತಿಸಿಕೊಂಡಿರುವ ವಿಜಯ್ ದೇವ್ ಅವರ ರೆಸಾರ್ಟ್​ ಮೇಲೆ ಮಂಗಳವಾರ ಸಂಜೆ ಐಟಿ ದಾಳಿಯಾಗಿದ್ದು, ರೆಸಾರ್ಟ್​ಗೆ ಸಂಬಂಧಿಸಿದಂತೆ ಸುಮಾರು ಒಂದು ಗಂಟೆ‌ವರೆಗೆ ದಾಖಲೆ‌ ಪರಿಶೀಲಿಸಿ ತೆರಳಿದ್ದಾರೆ.

ಇಂದು ಮಧ್ಯಾಹ್ನ ಅಷ್ಟೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ, ಕಾಂಗ್ರೆಸ್​​ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ವೆಂಕಟ್ ರಾಜು ಮನೆ ಮೇಲೆ ದಾಳಿಯಾಗಿತ್ತು. ಸುಮಾರು 6 ಕಾರುಗಳಲ್ಲಿ ಬಂದಿದ್ದ 20 ಐಟಿ ಅಧಿಕಾರಿಗಳ ತಂಡ ಶೋಧ ಕಾರ್ಯ ನಡೆಸಿತ್ತು.


Share It

You cannot copy content of this page