ಸುದ್ದಿ

ಬಸವಣ್ಣನನ್ನು ಸ್ಮರಿಸುವುದು ಪ್ರತಿ ಕನ್ನಡಿಗ ಹಾಗೂ ಭಾರತೀಯನ ಕರ್ತವ್ಯ: ಸಿದ್ದರಾಮಯ್ಯ

Share It

ಬೆಂಗಳೂರು: ಅಂಥವರನ್ನು ನೆನೆಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿದೆ.

ಬಸವಣ್ಣ ವಿಶ್ವ ಗುರುಗಳಾಗಿದ್ದು, ಅವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ, ಸಮಾಜದ ಪರಿವರ್ತನೆಗೆ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಸುವ, ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುವ ಕೆಲಸವನ್ನು ಬಸವಣ್ಣ ತಮ್ಮ ಜೀವಿತ ಕಾಲದಲ್ಲಿ ಮಾಡಿದ್ದಾರೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಬಸವ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.


Share It

You cannot copy content of this page