ಜಮಖಂಡಿ: ಅಗ್ಮಿ ದುರಂತ ಸಂಭವಿಸಿದ್ದು, ವಾಣಿಜ್ಯ ಮಳಿಗೆಯೊಂದು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ನಡೆದಿದೆ.
ಜಮಖಂಡಿಯ ಕಟ್ಟೆ ಕೆರೆ ಸಮೀಪದಲ್ಲಿರುವ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿಯಲ್ಲಿದ್ದ ವಸ್ತುಗಳೆಲ್ಲವೂ ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.

