ಬೆಂಗಳೂರು: ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆಯ ಕುರಿತು ತುರ್ತು ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಪೊಲೀಸರು ವಿದ್ಯಾರ್ಥಿಗಳ ಮೇಲೆ ನಡೆಸಿದ ದಾಳಿಯ ವಿಡಿಯೋಗಳನ್ನು ನೋಡಿ, ನ್ಯಾಯಾಲಯ ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಂಡು, ವಿಚಾರಣೆ ನಡೆಸಬೇಕು ಎಂದು ಕೋರಿ ಸಿಜೆಪಿ ಕೋರಿತ್ತು.
ಆದರೆ, ತುರ್ತು ಅರ್ಜಿ ವಿಚಾರಣೆಗೆ ನಿರಾಕರಿಸಿರುವ ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಸೂರ್ಯಕಾಂತ್ ವಿಡಿಯೋ ನೋಡಿಕೊಂಡು ಕೂರಲು ಸಮಯವಿಲ್ಲ, ತುರ್ತು ವಿಚಾರಣೆ ಸಾಧ್ಯವೂ ಇಲ್ಲ ಎಂದು ಅರ್ಜಿ ವಜಾಗೊಳಿಸಿದ್ದಾರೆ.
ಸ್ವಯಂಪ್ರೇರಿತ ಪ್ರತಕಣ ದಾಖಲಿಸಿಕೊಳ್ಳಲು ಸಾಧ್ಯವಿಲ್ಲ, ಇದಕ್ಕೆಲ್ಲ ಈಗ ಸಮಯ ಇಲ್ಲ, ಸುಮ್ಮನೆ ನ್ಯಾಯಾಲಯದ ಸಮಯ ವ್ಯರ್ಥ ಮಾಡಬೇಡಿ ಎಂದು ನಿರಾಕರಣೆ ಮಾಡಿದ್ದಾರೆ.

