ತುಮಕೂರು: ಮಾಜಿ ಪ್ರಧಾನಿ ಎಚದ.ಡಿ.ದೇವೇಗೌಡ ಅವರನ್ನು ಕಾರ್ಯಕ್ರಮದಲ್ಲಿ ಅಡ್ಡಗಟ್ಟಿ ಅವಮಾನಿಸಿದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೂರು ದಾಖಲಿಸಲಾಗಿದೆ.
ಸೋಮವಾರ ತುಮಕೂರಿನ ಕಾರ್ಯಕ್ರಮವೊಂದರಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಭಾಗವಹಿಸಿದ್ದರು. ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದರು.
ಈ ವೇಳೆ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ, ಕಾಂಗ್ರೆಸ್ ಕಾರ್ಯಕರ್ತರು ದೇವೇಗೌಡರ ಮುಗಿಬಿದ್ದರು. ದೇವೇಗೌಡರ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು.
ಹೀಗಾಗಿ, ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಜೆಡಿಎಸ್ ಲೀಗಲ್ ಸೆಲ್ ಮುಖ್ಯಸ್ಥ ಎ.ಪಿ.ರಂಗನಾಥ್, ಕಾಂಗ್ರೆಸ್ ಕಾರ್ಯಕರ್ತರ ಈ ವರ್ತನೆಗೆ ಡಿ.ಕೆ.ಶಿವಕುಮಾರ್ ಅವರ ಕುಮ್ಮಕ್ಕು ಕಾರಣ, ಅವರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವಂತೆ ಕರೆ ನೀಡಿರುವುದು, ಕಾಂಗ್ರೆಸ್ ಕಾರ್ಯಕರ್ತರಿಗೆ ಲೈಸೆನ್ಸ್ ಕೊಟ್ಟಂತಾಗಿದೆ. ಹೀಗಾಗಿ, ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಒಬ್ಬ ಮಾಜಿ ಪ್ರಧಾನಿಗೆ ಸೂಕ್ತ ರಕ್ಷಣೆ ಇಲ್ಲದಂತಹ ಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ. ಅಧಿಕಾರದಲ್ಲಿ ಇರುವವರೇ, ಪ್ರತಿಭಟನೆಗೆ ಕುಮ್ಮಕ್ಕು ನೀಡಿರುವ ಕಾರಣ ಕಾಂಗ್ರೆಸ್ ಕಾರ್ಯಕರ್ತರು ಸ್ವೇಚ್ಛೆಯಿಂದ ವರ್ತನೆ ಮಾಡುತ್ತಿದ್ದಾರೆ. ಇದಕ್ಕೆಲ್ಲ ಆಯೋಗ ಕಡಿವಾಣ ಹಾಕದಿದ್ದರೆ, ಮುಂದೆ ಬೇರೆಯದ್ದೇ ಸಮಸ್ಯೆಯಾಗುತ್ತದೆ. ಹೀಗಾಗಿ, ಅವರ ವಿರುದ್ಧ ಸೂಕ್ತ ಕ್ರಮವಾಗಬೇಕು ಎಂದು ಒತ್ತಾಯಿಸಿದ್ದಾರೆ.