ರಾಜಕೀಯ ಸುದ್ದಿ

ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಕಾಡುಗೊಲ್ಲ ಸಮುದಾಯ

Share It

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರಿ ಪ್ರತಿಭಟನೆ ನಡೆಸಿದ ಕಾಡುಗೊಲ್ಲರು ತಮಗೆ ಸಾಂವಿಧಾನಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಭದ್ರತೆ ನೀಡಬೇಕೆಂದು ಒತ್ತಾಯಿಸಿದರು.

ಕಾಡುಗೊಲ್ಲರ ಪ್ರತಿಭಟನೆಯ ನೇತೃತ್ವವನ್ನು ವಹಿಸಿದ್ದ ಹೊಳಲ್ಕೆರೆಯ ಮಾಜಿ ಶಾಸಕ ಎ.ವಿ.ಉಮಾಪತಿ ಮಾತನಾಡಿ, ‘2024 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತುಮಕೂರು ಮತ್ತು ಚಿತ್ರದುರ್ಗ ಕ್ಷೇತ್ರಗಳಲ್ಲಿ ಸೋಲಲು ಕಾಡುಗೊಲ್ಲರೇ ಕಾರಣ. ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದ ವೋಟ್ ಬ್ಯಾಂಕ್ ಆಗಿದ್ದ ಕಾಡುಗೊಲ್ಲರು ಯಾವುದೇ ಸಾಂವಿಧಾನಿಕ, ಆರ್ಥಿಕ ಸಮಾನತೆ ಪಡೆದಿಲ್ಲ. ‌

ಇದರಿಂದಾಗಿ ಈ ಎರಡು ಜಿಲ್ಲೆಗಳಲ್ಲಿರುವ ಕಾಡುಗೊಲ್ಲರು ಕಳೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಮತ್ತು ಚಿತ್ರದುರ್ಗ ಕ್ಷೇತ್ರಗಳಲ್ಲಿ ಸಂಪೂರ್ಣವಾಗಿ ಬಿಜೆಪಿ ಪರ ವಾಲಿದ್ದಾರೆ. ಇದೇ ರೀತಿ ಕಾಡುಗೊಲ್ಲರಿಗೆ ಅನ್ಯಾಯವಾದರೆ ರಾಜ್ಯಾದ್ಯಂತ ಹೋರಾಡುತ್ತೇವೆಂದು ಎ.ವಿ.ಉಮಾಪತಿ ಎಚ್ಚರಿಸಿದರು.


Share It

You cannot copy content of this page