ರಾಜಕೀಯ ಸುದ್ದಿ

ಕಾಂಗ್ರೆಸ್ ಸೇರ್ಪಡೆಯಾದ ಕೊಪ್ಪಳ ಹಾಲಿ ಸಂಸದ ಕರಡಿ ಸಂಗಣ್ಣ

Share It

ಬೆಂಗಳೂರು: ಬಿಜೆಪಿಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕೊಪ್ಪಳ ಹಾಲಿ ಸಂಸದ ಕರಡಿ ಸಂಗಣ್ಣ ಬೆಂಗಳೂರಿನಲ್ಲಿಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕರಡಿ ಸಂಗಣ್ಣ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಅವರು, ಇವತ್ತು ಸಂಭ್ರಮದ ದಿನ. ಇವತ್ತು ನಾನು ಕಾಂಗ್ರೆಸ್ ಸೇರಲು ಸವದಿ ಕಾರಣ. ಸಿದ್ದರಾಮಯ್ಯ ಜೊತೆ ಕೆಲಸ ಮಾಡಿದ್ದೇನೆ. ಡಿ.ಕೆ ಶಿವಕುಮಾರ್ ಪಕ್ಷೇತರರಾಗಿ ಗೆದ್ದಾಗ ನಾನು ಗೆದ್ದಿದ್ದೆ ಎಂದು ಹೇಳಿದರು.

ರಾಮುಲು ಅವರು ನನ್ನ ರಾಜಕೀಯ ಗುರು. ಖಾದ್ರಿ ಅವರನ್ನ ನೆನಪು ಮಾಡಿಕೊಳ್ಳುತ್ತೇನೆ. ಕಾಂಗ್ರೆಸ್ ಪಕ್ಷದ ಸಿದ್ದಾಂತ ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದೇನೆ. ಕೊಪ್ಪಳದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ ಎಂಬ ಚಾಲೆಂಜ್ ಮಾಡಿದ್ದೇವೆ ಎಂದರು.

ನಾನು ಅಧಿಕಾರಕ್ಕೆ ಬಂದಿಲ್ಲ. ಜಿಲ್ಲೆಯ ಅಭಿವೃದ್ಧಿಗಾಗಿ ಕಾಂಗ್ರೆಸ್‌ ಪಕ್ಷಕ್ಕೆ ಬಂದಿದ್ದೇನೆ. ಕಾಂಗ್ರೆಸ್ ‌ಪಕ್ಷ ಸೇರ್ಪಡೆ ಖುಷಿ ಕೊಟ್ಟಿದೆ. ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ, ತ್ಯಾಗ ಬಲಿದಾನ ಮಾಡಿದ ಪಕ್ಷ ಎಂದು ಕಾಂಗ್ರೆಸ್‌ ಪಕ್ಷವನ್ನು ಹಾಡಿ ಹೊಗಳಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ತನಗೆ ನೀಡಬೇಕೆಂದು ಕರಡಿ ಸಂಗಣ್ಣ ಬಿಗಿಪಟ್ಟು ಹಿಡಿದಿದ್ದರು. ಆದರೆ ಬಿಜೆಪಿ ಹೈಕಮಾಂಡ್‌ ಅವರ ಹಿರಿಯ ಸೊಸೆ ಮಂಜುಳಾಗೆ ನೀಡಿದ್ದರು. ಆದರೆ ಅವರು ಚುನಾವಣೆಯಲ್ಲಿ ಸೋತಿದ್ದರು. ಈ ಲೋಕಸಭಾ ಚುನಾವಣೆಯಲ್ಲೂ ಕರಡಿ ಸಂಗಣ್ಣ ಬಿಜೆಪಿ ಟಿಕೆಟ್‌ ಬಯಸಿದ್ದರು. ಆದರೆ ಬಿಜೆಪಿಯಿಂದ ಈ ಬಾರಿ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ವೈದ್ಯ ಬಸವರಾಜ ಎಸ್‌. ಕ್ಯಾವಟೂರ್‌ ಅವರಿಗೆ ನೀಡಲಾಗಿದೆ.


Share It

You cannot copy content of this page