ಸುದ್ದಿ

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪ್ರಕಟಿಸಿದ ಸರಕಾರ !

Share It

ಬೆಂಗಳೂರು: ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಿಗೆ ಅಧ್ಯಕ್ಷ – ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪಟ್ಟಿಯನ್ನು ನಗರಾಭಿವೃದ್ಧಿ ಇಲಾಖೆ ಪ್ರಕಟಿಸಿದೆ.

61 ನಗರಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ ಪಟ್ಟಿ ಪ್ರಕಟಿಸಲಾಗಿದೆ. 61 ನಗರ ಸಭೆಗಳಲ್ಲಿನ ಅಧ್ಯಕ್ಷ ಹುದ್ದೆಗಳ ಪೈಕಿ 16ನ್ನು ಸಾಮಾನ್ಯ ವರ್ಗಕ್ಕೆ ನೀಡಲಾಗಿದೆ. ಇನ್ನು 15 ಅಧ್ಯಕ್ಷ ಹುದ್ದೆಗಳನ್ನು ಸಾಮಾನ್ಯ ಮಹಿಳೆಯರಿಗೆ ಮೀಸಲು ಮಾಡಲಾಗಿದೆ.

5 ಎಸ್​ಸಿ ಮೀಸಲಾತಿ ನೀಡಲಾಗಿದ್ದರೆ, 5 ಎಸ್​ಸಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಲಾಗಿದೆ. 2 ಎಸ್​ಟಿ ಸಮುದಾಯಕ್ಕೆ ಮೀಸಲಾತಿ ನೀಡಿದ್ದರೆ, 2 ಎಸ್​ಟಿ ಮಹಿಳೆಯರಿಗೆ ಮೀಸಲಾತಿ ನೀಡಲಾಗಿದೆ.


Share It

You cannot copy content of this page