ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ರೋಸ್ ಅವೆನ್ಯೂ ಕೋಟರ್್ ಏಪ್ರಿಲ್ 23ರವರೆಗೆ ವಿಸ್ತರಿಸಿದೆ.
ಸೋಮವಾರಕ್ಕೆ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನ ಕೊನೆಗೊಂಡಿದ್ದು, ಅವರನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ವಿಚಾರಣೆ ನಡೆಸಿ, ಈ ಆದೇಶ ಹೊರಡಿಸಿದರು.
ಇನ್ನೊಂದೆಡೆ, ತಮ್ಮ ಬಂಧನವನ್ನು ಎತ್ತಿ ಹಿಡಿದ ದೆಹಲಿ ಹೈಕೋಟರ್್ ಆದೇಶವನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅಜರ್ಿ ವಿಚಾರಣೆ ನಡೆಸಿದ ಸುಪ್ರೀಂ ಕೋಟರ್್, ಇಡಿಗೆ ನೋಟಿಸ್ ನೀಡಿತು. ಏ. 29ರಂದು ಮುಂದಿನ ವಿಚಾರಣೆ ನಡೆಸುವುದಾಗಿ ತಿಳಿಸಿದ್ದರಿಂದ ಕೇಜ್ರೀವಾಲ್ ಅವರ ಜೈಲುವಾಸ ಮುಂದುವರಿದಿದೆ.
ಕೇಜ್ರಿವಾಲ್ರನ್ನು ಜೈಲಿನಿಂದ ಬಿಡುಗಡೆ ಮಾಡಬೇಕೆಂಬ ಮನವಿ ತಿರಸ್ಕರಿಸಿರುವ ಸುಪ್ರೀಂ ಕೋಟರ್್, ಈ ಕುರಿತು ಇಡಿ ಅಧಿಕಾರಿಗಳಿಂದ ಪ್ರತಿಕ್ರಿಯೆ ಕೇಳಿ ನೋಟಿಸ್ ಜಾರಿ ನೀಡಿದೆ. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಜಾರಿ ನಿದರ್ೇಶನಾಲಯವನ್ನು ಪ್ರತಿನಿಧಿಸಿದ್ದರು. ಕೇಜ್ರಿವಾಲ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಗ್ವಿ ವಾದ ಮಂಡಿಸಿದರು