ಬೆಂಗಳೂರು: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳ ಡಿವಿಡೆಂಡ್ ಚೆಕ್ ಅನ್ನು ಶುಕ್ರವಾರ ಸರಕಾರಕ್ಕೆ ಹಸ್ತಾಂತರಿಸಿತು.
ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಕೆಎಸ್ಡಿಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಅವರು ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನಸೌಧದಲ್ಲಿ ನೀಡಿದರು.
ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ. ಎಂ.ಸಿ. ಸುಧಾಕರ್, ಸಂತೋಷ್ ಲಾಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಪಿ.ಕೆ. ಪ್ರಶಾಂತ್ ಉಪಸ್ಥಿತರಿದ್ದರು.
