ಬೆಂಗಳೂರು: ಯುಗಾದಿ ಹಬ್ಬಕ್ಕೆ ಊರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕೆಸ್ಎಸ್ಆರ್ಟಿಸಿ ಸೇರಿದಂತೆ ನಾಲ್ಕು ನಿಗಮಗಳಿಂದ 2000 ಹೆಚ್ಚುವರಿ ಬಸ್ಗಳನ್ನು ಓಡಿಸಲು ತೀಮರ್ಾನಿಸಲಾಗಿದೆ.
ರಾಜಧಾನಿ ಬೆಂಗಳೂರಿನಿಂದ ಯುಗಾದಿ ಹಬ್ಬಕ್ಕೆ ಲಕ್ಷಾಂತರ ಜನ ತಮ್ಮ ತಮ್ಮ ಊರುಗಳಿಗೆ ತೆರಳುತ್ತಾರೆ. ಇದರಿಂದ ಬಸ್ಸುಗಳಲ್ಲಿ ಜನದಟ್ಟಣೆ ಹೆಚ್ಚಾಗುತ್ತದೆ. ಖಾಸಗಿ ಬಸ್ಗಳು ಇದೇ ಸಂದರ್ಭವನ್ನು ಬಳಸಿಕೊಂಡು ಹೆಚ್ಚುವರಿ ಶುಲ್ಕವನ್ನು ವಸೂಲಿ ಮಾಡುತ್ತಾರೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು, ಸುಮಾರು 2000 ಹೆಚ್ಚುವರಿ ಬಸ್ಗಳನ್ನು ಬಿಡಲು ಸಾರಿಗೆ ನಿಗಮ ತೀಮರ್ಾನಿಸಿದೆ.
ಶನಿವಾರ, ಭಾನುವಾರ ವಾರಾಂತ್ಯದ ರಜೆಯಿದ್ದು, ಮಂಗಳವಾರ ಯುಗಾದಿ ಹಾಗೂ ಬುಧವಾರ ರಂಜಾನ್ ಪ್ರಯುಕ್ತ ಸರಕಾರಿ ರಜೆಗಳಿವೆ. ಹೀಗಾಗಿ, ಸೋಮವಾರ ಒಂದು ದಿನ ರಜೆ ಹಾಕಿಕೊಂಡು ಐದು ದಿನದ ರಜೆಯ ಮಜಾ ಅನುಭವಿಸಲು ಲಕ್ಷಾಂತರ ಜನ ತಮ್ಮ ಊರುಗಳಿಗೆ, ಪ್ರವಾಸಕ್ಕೆ, ದೇವಸ್ಥಾನಕ್ಕೆ ತೆರಳುತ್ತಾರೆ. ಹೀಗಾಗಿ, ಅವರ ಅನುಕೂಲಕ್ಕಾಗಿ 2000 ಬಸ್ಗಳ ಸೇವೆಯನ್ನು ಒದಗಿಸಲಾಗುತ್ತಿದೆ ಎಂದು ಕೆಎಸ್ಆರ್ಟಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.