Bengaluru: KSRTC ಬಸ್ ಚಾಲಕನ ಮೇಲೆ ಹಲ್ಲೆ: ಆರೋಪಿ ಬಂಧನ
ಬೆAಗಳೂರು: ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಯುವಕನೊಬ್ಬನನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಬAಧಿತನನ್ನು ಧೀಕ್ಷಿತ್ ಆಲಿಯಾಸ್ ಲಲ್ಲು ಎಂದು ಹೇಳಲಾಗಿದ್ದು, ಈತ ಕೆಎಸ್‌ಆರ್‌ಟಿಸಿ ಚಾಲಕ ಆನಂದ್ ಮೇಲೆ ಸಾರಕ್ಕಿ ಸಿಗ್ನಲ್ ಬಳಿ ಹಲ್ಲೆ ನಡೆಸಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಚಾಲಕ ಆನಂದ್ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಶನಿವಾರ ಕಲಾಸಿಪಾಳ್ಯದಿಂದ ಕೆಎಸ್‌ಆರ್‌ಟಿಸಿ ಬಸ್ ಕೊಳ್ಳೆಗಾಲಕ್ಕೆ ತೆರಳುತ್ತಿತ್ತು. ಈ ವೇಳೆ ಸಾರಕ್ಕಿ ಸಿಗ್ನಲ್ ಬಳಿ ಬಸ್ ಮುಂದಕ್ಕೆ ಬೈಕ್ ನಿಲ್ಲಿಸಿದ ಧೀಕ್ಷಿತ್ ಚಾಲಕನೊಂದಿಗೆ ಗಲಾm ೆತೆಗೆದ ಎನ್ನಲಾಗಿದೆ. ನನ್ನ ಬೈಕ್ ಅನ್ನೇ ಓವರ್ ಟೇಕ್ ಮಾಡ್ತೀಯಾ ಎಂದು ಪ್ರಶ್ನಿಸಿ ಹಲ್ಲೆ ನಡೆಸಿದ ಎಂದು ಆರೋಪಿಸಲಾಗಿದೆ.
ಹಲ್ಲೆಯ ನಂತರ ಪ್ರಯಾಣಿಕರೆಲ್ಲ ಆತನನ್ನು ಸುತ್ತುವರಿಯುತ್ತಿದ್ದಂತೆ ಆತ ಅಲ್ಲಿಂದ ಪರಾರಿಯಾಗಿದ್ದ. ಹೀಗಾಗಿ, ಆನಂದ್ ದೂರು ನೀಡಿದ್ದರು. ದೂರಿನ ಅನ್ವಯ ಆತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.


