ಉಪಯುಕ್ತ ಸುದ್ದಿ

ಹಬ್ಬಕ್ಕೆ ಊರಿಗೆ ಹೋಗುವವರಿಗೆ KSRTC ಸಿಹಿಸುದ್ದಿ: ಯುಗಾದಿ ಮತ್ತು ರಂಜಾನ್‌ಗಾಗಿ 2 ಸಾವಿರ ಬಸ್

Share It

ಬೆಂಗಳೂರು: ಯುಗಾದಿ ಮತ್ತು ರಂಜಾನ್ ಹಬ್ಬದ ಅಂಗವಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ೨೦೦೦ ಹೆಚ್ಚುವರಿ ಬಸ್‌ಗಳನ್ನು ಓಡಿಸಲು ತೀರ್ಮಾನಿಸಿದೆ.

ಮಾರ್ಚ್ 19 ರಂದು ಯುಗಾದಿ ಹಬ್ಬ ಹಾಗೂ ಮಾರ್ಚ್ 21 ರಂದು ರಂಜಾನ್ ಹಬ್ಬವಿದ್ದು, ಇದಕ್ಕಾಗಿ ಬೆಂಗಳೂರಿನಿAದ ತಮ್ಮ ಸ್ವಂತ ಊರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ವ್ಯವಸ್ಥೆ ಕಲ್ಪಿಸಲಾಗಿದೆ. ಮಾರ್ಚ್ 18ರ ಬುಧವಾರ, ಗುರುವಾರ ಹಾಗೂ ಶುಕ್ರವಾರ ಬಸ್ ವ್ಯವಸ್ಥೆ ಇರಲಿದೆ ಎಂದು ಸಂಸ್ಥೆ ತಿಳಿಸಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ಕಾರ್ಯಾಚರಣೆ ನಡೆಸಲಿವೆ. ಈ ಬಸ್‌ಗಳಿಗೆ ಮುಂಗಡವಾಗಿ ಸೀಟ್ ಕಾಯ್ದಿರಿಸುವ ಅವಕಾಶವನ್ನು ಸಹ ನೀಡಲಾಗಿದೆ. ಟಿಕೆಟ್ ಮೇಲೆ ಕಾಯ್ದಿರಿಸಿರುವ ನಿಲ್ದಾಣ ಅಥವಾ ಪಿಕಪ್ ಪಾಯಿಂಟ್ ಗೆ ತೆರಳುವಂತೆ ಸೂಚಿಸಲಾಗಿದೆ.

ಟಿಕೆಟ್‌ಗಳನ್ನು ಸಂಸ್ಥೆಯ ವೆಬ್ ಸೈಟ್ ಆದ www/ksrtc.gov.in ನಲ್ಲಿ ಕಾಯ್ದಿರಿಸಿಕೊಳ್ಳಬಹುದು. ರಾಜ್ಯ ಹಾಗೂ ಹೊರರಾಜ್ಯದ ಗಣಕೀಕೃತ ಬುಕಿಂಗ್ ಕೌಂಟರ್‌ಗಳಲ್ಲಿ ಟಿಕೆಟ್‌ಗಳನ್ನು ಕಾಯ್ದಿರಿಸಬಹುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರಿಗೆ ಟಿಕೆಟ್ ಕಾಯ್ದಿರಿಸಿದರೆ ಶೇ. 5ರಷ್ಟು ರಿಯಾಯಿತಿ ಹಾಗೂ ಅಪ್ ಅಂಡ್ ಡೌನ್ ಟಿಕೆಟ್ ಕಾಯ್ದಿರಿಸಿದರೆ, ಶೇ. 10 ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.


Share It

You cannot copy content of this page