ಜಿಲ್ಲೆ

ರಾಣೆಬೆನ್ನೂರು ಬಳಿ ಕೆಎಸ್ ಆರ್ ಟಿಸಿ ಬಸ್ ಗೆ ಬೆಂಕಿ

Share It

ಹಾವೇರಿ: ಬೆಂಗಳೂರಿನಿಂದ ಗದಗಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ದೇವರುಗುಡ್ಡ ಗ್ರಾಮದ ಬಳಿ ಭೀಕರ ಘಟನೆ ನಡೆದಿದೆ. ಅದೃಷ್ಟವಶಾತ್ ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್ಸಿನಲ್ಲಿದ್ದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಗದಗಕ್ಕೆ ತೆರಳುತ್ತಿದ್ದ ಪಲ್ಲಕ್ಕಿ ಬಸ್ ರಾಜ್ಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದಾಗ ದೇವರುಗುಡ್ಡ ಬಳಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಚಾಲಕ ಪಕ್ಕೀರಪ್ಪ, ಬಸ್ಸನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಯುವಂತೆ ಹೇಳಿದರು. ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ದುರಂತವೊಂದು ತಪ್ಪಿತು. ಬೆಂಕಿ ಹೊತ್ತಿಕೊಂಡ ಕೆಲವೇ ನಿಮಿಷಗಳಲ್ಲಿ ಇಡೀ ಬಸ್ ಹೊತ್ತಿ ಉರಿದು ಭಸ್ಮವಾಯಿತು. ಸಾರಿಗೆ ಸಿಬ್ಬಂದಿ ಬೆಂಕಿ ನಂದಿಸಲು ಶತಪ್ರಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ. ರಾಣೆಬೆನ್ನೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


Share It

You cannot copy content of this page