ಬೆಂಗಳೂರು: 45 ವರ್ಷದ ಮಹಿಳೆಯೊಬ್ಬರು ಅಪಾರ್ಟ್ಮೆಂಟ್ ಬಾಲ್ಕನಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲ್ಲೇಶ್ವರದ ಅಪಾರ್ಟ್ಮೆಂಟ್ ವೊಂದರಲ್ಲಿ ನಡೆದಿದೆ.
ಅಪಾರ್ಟ್ ಮೆಂಟ್ ನಾಲ್ಕನೇ ಮಹಡಿಯ ಬಾಲ್ಕನಿಯಲ್ಲಿ ಮಹಿಳೆಯ ಶವ ನೇತಾಡುತ್ತಿರುವುದನ್ನು ಗಮನಿಸಿದ ಪಕ್ಕದ ಮನೆಗಳ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಮಲ್ಲೇಶ್ವರ ಪೊಲೀಸರು ಸ್ಥಳಕ್ಕೆ ಆಗಮಿಸಿ, ಶವವನ್ನು ಕೆಳಗಿಳಿಸಿ ಪರಿಶೀಲನೆ ನಡೆಸಿದ್ದಾರೆ.
ಮಹಿಳೆ ಅಪಾರ್ಟ್ಮೆಂಟ್ ನಿವಾಸಿಯಲ್ಲ ಎಂಬುದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದ್ದು, ಆಕೆ ನೇಣು ಬಿಗಿದುಕೊಂಡ ಬಾಲ್ಕನಿಯ ಮನೆ ಯಾರದ್ದು? ಆ ಮಹಿಳೆ ಅಲ್ಲಿಗೆ ಬಂದಿದ್ದೇಕೆ? ಆಕೆ ನೇಣು ಬಿಗಿದುಕೊಂಡಿದ್ದಾರಾ? ಅಥವಾ ಕೊಲೆಯಾ ಎಂಬೆಲ್ಲ ಅನುಮಾನಗಳನ್ನು ಇಟ್ಟುಕೊಂಡು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

