ಚನ್ನರಾಯಪಟ್ಟಣ: ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಜನಿವಾರ ಜಯರಾಮಣ್ಣ ಮತ್ತು ಬೆಂಬಲಿಗರು ಚನ್ನರಾಯಪಟ್ಟಣ ತಾಲೂಕಿನ ಹೇಮಾವತಿ ಸಕ್ಕರೆ ಕಾರ್ಖಾನೆಯ ಮಾಜಿ ನಿರ್ದೇಶಕರು ಹಾಗೂ ಜನಿವಾರ ಗ್ರಾಮದ ಹಿರಿಯ ಜೆಡಿಎಸ್ ಮುಖಂಡರಾದ ಜೆ ಎಸ್ ಜಯರಾಮ್ ,ಮತ್ತು ಗೌಡಗೆರೆ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ ಜಿ ಎಂ ರಮೇಶ, ಕಸಬಾ ಹೋಬಳಿಯ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ ಜಿ ಕೆ ರವಿಕುಮಾರ್, ಜನಿವಾರ ಗ್ರಾಮದ ಜೆಡಿಎಸ್ ಮುಖಂಡರಾದ ಶಿವಲಿಂಗೇಗೌಡ, ಸೇರಿದಂತೆ ಇತರರು ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು ಒಪ್ಪಿ ಜೆಡಿಎಸ್ ಪಕ್ಷವನ್ನು ತೊರೆದು ಮಾಜಿ ವಿಧಾನ ಪರಿಷತ್ ಸದಸ್ಯರಾದ ಸನ್ಮಾನ್ಯ ಎಂ.ಎ.ಗೋಪಾಲಸ್ವಾಮಿ ರವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಮುಖಂಡರಾದ ಎಂ.ಶಂಕರ್ ರವರು, ಬ್ಲಾಕ್ ಅಧ್ಯಕ್ಷರಾದ ಎಂ.ಕೆ.ಮಂಜೇಗೌಡರು, ಮಾಜಿ ಜಿಲ್ಲಾ ಪಂಚಾಯಿತ್ ಸದಸ್ಯರಾದ ಕಿಶೋರ್, ಪುರಸಭಾ ಸದಸ್ಯರಾದ ಶ್ರೀಮತಿ ಸುಜಾತ, ನಗರ ಯೋಜನಾ ಪ್ರಾಧಿಕಾರದ ನಿರ್ದೇಶಕರಾದ ಪ್ರವೀಣ್,ಎಂ ಹೊನ್ನೇನಹಳ್ಳಿ ಜಗದೀಶ್, ಸೇರಿದಂತೆ ಇತರರು ಹಾಜರಿದ್ದರು.