ಬೆಂಗಳೂರು : ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಅಬಕಾರಿ ಡಿಸಿ ಸೇರಿ ಮೂವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಶನಿವಾರ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ ನಡೆಸಿ, ಬ್ಯಾಟರಾಯನಪುರ ಕಚೇರಿಯಲ್ಲಿ ಅಬಕಾರಿ ಡಿಸಿ ಜಗದೀಶ್ ನಾಯಕ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಇದೀಗ ಅವರಿಗೆ ಬೆಂಗಳೂರಿನ ಲೋಕಾಯುಕ್ತ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಮೈಕ್ರೋ ಬ್ರೇವರಿ ಹಾಗೂ ಸಿಎಲ್-7 ಲೈಸೆನ್ಸ್ ನೀಡುವ ಸಂಬAಧ ಜಗದೀಶ್ ನಾಯಕ್ 75 ಲಕ್ಷ ರು. ಲಂಚಕ್ಕೆ ಬೇಡಿಕೆಯಿಟ್ಟಿದ್ದು, ಅದರ ಅಡ್ವಾನ್ಸ್ ಆಗಿ 25 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ ನಡೆದಿತ್ತು. ಈ ವೇಳೆ ಮೂವರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು.
ಇದೀಗ ಮೂವರು ಅಧಿಕಾರಿಗಳಿಗೆ ನ್ಯಾಯಾಲಯದಿಂದ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹೀಗಾಗಿ, ಲೋಕಾಯುಕ್ತ ಪೊಲೀಸರು, ಅಧಿಕಾರಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಿದ್ದಾರೆ.

