ಅಪರಾಧ ಸುದ್ದಿ

ಹುಬ್ಬಳ್ಳಿ-ಧಾರವಾಡ ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

Share It

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಮಹಾನಗರ ಪಾಲಿಕೆಯ 12 ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ. ದಾಳಿಯ ವೇಳೆ ಇ-ಖಾತಾ ಪೆಂಡಿಂಗ್ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಲಾಗಿದೆ.

ಲೋಕಾಯುಕ್ತ ನ್ಯಾಯಮೂರ್ತಿ ಜಿ.ಎಸ್. ಪಾಟೀಲ್ ಅವರ ಸೂಚನೆ ಮೇರೆಗೆ ದಾಳಿ ನಡೆಸಿದ್ದು, ಎಸ್‌ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.


Share It

You cannot copy content of this page