ಬೆಂಗಳೂರು: ಬೆಂಗಳೂರು ಗ್ರಾಮಾಂತರ ಭಾಗದ ಆರು ಕಡೆ ಲೋಕಾಯುಕ್ತ ದಾಳಿ ನಡೆದಿದ್ದು, ಕೋಟ್ಯಂತರ ರು. ಅಕ್ರಮ ಹಣ ಪತ್ತೆಯಾಗಿದೆ.
ವಸತಿ ಶಿಕ್ಷಣ ಸಂಸ್ಥೆಗಳ ಅಧೀಕ್ಷಕ ಅಭಿಯಂತರ ಹೆಚ್.ಎಂ ಜನಾರ್ದನ ಎಂಬುವವರ ಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಒಂದು ಕೋಟಿ ಎಪ್ಪತ್ತು ಲಕ್ಷ ರು. ಹಣವನ್ನು ವಶಕ್ಕೆ ಪಡೆದಿದ್ದಾರೆ.
ಜನಾರ್ದನ ಹಾಗೂ ಅವರ ಗೆಳೆಯ ಸುಜಯ್ ಶೆಟ್ಟಿ ಎಂಬುವವರಿಗೆ ಸೇರಿದ ಆರು ಕಡೆ ದಾಳಿ ನಡೆದಿದೆ. ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಆರೋಪದಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, ಮತ್ತಷ್ಟು ಮಾಹಿತಿ ಸಂಗ್ರಹಿಸುವ ಕಾರ್ಯವನ್ನು ಅಧಿಕಾರಿಗಳು ಮಾಡುತ್ತಿದ್ದಾರೆ.

