ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಾರಿ ಮಾಲೀಕರು ಮುಷ್ಕರ ನಡೆಸಲು ಮುಂದಾಗಿದ್ದು, ಏ.೧೪ರ ಮಧ್ಯರಾತ್ರಿಯಿಂದ ಲಾರಿಗಳ ಸಂಚಾರ ಬಂದ್ ಆಗಲಿದೆ.
ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಲಾರಿ ಮಾಲೀಕರು ನಡೆಸುತ್ತಿರುವ ಮುಷ್ಕರದ ಹಿನ್ನೆಲೆಯಲ್ಲಿ ಸುಮಾರು ೬ ಲಕ್ಷ ಲಾರಿಗಳ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಏಪ್ರಿಲ್ 14 ರ ಮಧ್ಯರಾತ್ರಿಯಿಂದಲೇ ಮುಷ್ಕರ ಆರಂಭವಾಗಲಿದೆ.
ಏರ್‌ಪೋರ್ಟ್ ಟ್ಯಾಕ್ಸಿ, ಗೂಡ್ಸ್ ವಾಹನಗಳು ಕೂಡ ಸಂಚಾರ ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ. ಲಾರಿ ಮಾಲೀಕರ ಸಂಘ ಸರಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಮುಷ್ಕರ ವಾಪಸ್ ಪಡೆಯುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.