ಅಪರಾಧ ರಾಜಕೀಯ ಸುದ್ದಿ

ತಾಯಿಯ ಗೌರವಕ್ಕಾಗಿ ಸಾವಿರ ಉದ್ಯೋಗ ಕಳೆದುಕೊಳ್ಳುತ್ತೇನೆ: ಕಪಾಳಮೋಕ್ಷ ಕುರಿತು ಕೌರ್ ಪ್ರತಿಕ್ರಿಯೆ

Share It

ಚಂಡೀಘಡ: ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಆರೋಪದ ನಂತರ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿ ಕುಲ್ವಿಂದರ್ ಕೌರ್ ಅವರನ್ನು ಅಮಾನತುಗೊಳಿಸಿದ ನಂತರ ಬಂಧಿಸಲಾಗಿದೆ. ಈ ಬಗ್ಗೆ ಶುಕ್ರವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ಈ ಕೆಲಸವನ್ನು ಕಳೆದುಕೊಳ್ಳುವ ಭಯವಿಲ್ಲ… ನಾನು ಸಿದ್ಧಳಿದ್ದೇನೆ. ನನ್ನ ತಾಯಿಯ ಗೌರವಕ್ಕಾಗಿ ಇಂತಹ ಸಾವಿರಾರು ಉದ್ಯೋಗಗಳನ್ನು ಕಳೆದುಕೊಳ್ಳುತ್ತೇನೆ” ಎಂದು ಹೇಳಿದ್ದಾರೆ.

ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಗೆದ್ದ ಕಂಗಣಾ ರನಾವತ್ ಅವರು ಗುರುವಾರ ದೆಹಲಿ ವಿಮಾನ ಹತ್ತಲು ಕಾಯುತ್ತಿದ್ದಾಗ ವಿಮಾನ ನಿಲ್ದಾಣದಲ್ಲಿ ಕೌರ್ ಅವರು ಕಪಾಳಮೋಕ್ಷ ಮಾಡಿದ್ದಾರೆ ಮತ್ತು “ರೈತರನ್ನು ಅಗೌರವಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಕೆಲವೇ ಗಂಟೆಗಳಲ್ಲಿ ಆಕೆಯನ್ನು ಅಮಾನತುಗೊಳಿಸಲಾಯಿತು ಮತ್ತು ತನಿಖೆಗೆ ಆದೇಶಿಸಲಾಯಿತು. ಇಂದು ಬೆಳಿಗ್ಗೆ ಸಿಐಎಸ್ಎಫ್ (ಕೇಂದ್ರ ಕೈಗಾರಿಕಾ ಭದ್ರತಾ ಪಡೆ) ಕಾನ್ಸ್‌ಟೇಬಲ್ ಕೌರ್ ಅವರನ್ನು ಬಂಧಿಸಲಾಯಿತು.
ಗುರುವಾರ ಜಗಳದ ವೀಡಿಯೊ ವಿವಾದವಾದ ನಂತರ, “ಮೋದಿ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಗಳ ಬಗ್ಗೆ ನಟಿಯ 2020ರ ಹೇಳಿಕೆಗೆ ತಾನು ಪ್ರತಿಕ್ರಿಯಿಸಿದ್ದೇನೆ” ಎಂದು ಕೌರ್ ಹೇಳಿದರು.


Share It

You cannot copy content of this page