ಬೆಳಗಾವಿ: ಪ್ರೇಮಿಗಳಿಬ್ಬರು ಟೋದಲ್ಲಿಯೇ ನೇಣುಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ನಡೆದಿದೆ.
ಸವದತ್ತಿ ತಾಲೂಕಿನ ಮುನವಳ್ಳಿ ಗ್ರಾಮದ ರಾಘವೇಂದ್ರ ಜಾಧವ್ (28) ಹಾಗೂ ರಂಜಿತಾ (26) ಮೃತ ಪ್ರೇಮಿಗಳು ಎನ್ನಲಾಗಿದೆ. ಈ ಇಬ್ಬರು ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ, ಇವರ ವಿವಾಹಕ್ಕೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.
ಕುಟುಂಬಸ್ಥರು ಬಲವಂತದಿಂದ ಕಳೆದ 15 ದಿನಗಳ ಹಿಂದೆಯಷ್ಟೇ ರಂಜಿತಾಗೆ ಬೇರೊಬ್ಬ ಯುವಕನ ಜತೆಗೆ ನಿಶ್ಚಿತಾರ್ಥ ಮಾಡಿದ್ದರು. ಇದರಿಂದ ಮನವೊಂದ ಪ್ರೇಮಿಗಳಿಬ್ಬರು ಇಂದು ಬೆಳಗ್ಗೆ
ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.