ಬೆಂಗಳೂರು: ಅಪ್ರಾಪ್ತ ಬಾಲಕಿಯ ಜತೆಗೆ ಅನುಚಿತ ವರ್ತನೆ ತೋರಿದ ಹಿನ್ನೆಲೆಯಲ್ಲಿ ಸ್ವಯಃ ಘೋ಼ಇತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಕೆಲವು ಅಸಹಜ ಪವಾಡಗಳಿಂದ ಕೆಲವು ಭಕ್ತರನ್ನು ಸಂಪಾದಿಸಿದ್ದ ಮಲ್ಲಿಕಾರ್ಜುನ ಮುತ್ಯಾ, ಬಾಲಕಿಯೊಬ್ಬಳನ್ನು ರೂಮ್‌ನಲ್ಲಿ ಬಾಲಕಿಯೊಬ್ಬಳನ್ನು ಅಸಭ್ಯವಾಗಿ ಎತ್ತಿ ಬಿಸಾಕಿ, ಅನುಚಿತವಾಗಿ ವರ್ತನೆ ಮಾಡಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಈ ಕುರಿತು ಪೊಲೀಸರು ಫೋಕ್ಸೋ ಕೇಸ್ ದಾಖಲಿಸಿಕೊಂಡಿದ್ದು, ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಹಲ್ ರೋಜಾ ಮಠಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಅನಂತರ ಬಾಲಕಿಯ ಪೋಷಕರನ್ನು ಪೊಲೀಸರು, ವಿಚಾರಣೆ ನಡೆಸಲಿದ್ದು, ಅನಂತರ ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ.
ಪೊಲೀಸರ ಕಾರ್ಯಾಚರಣೆ ಬೆನ್ನಲ್ಲೇ ಮಹಲ್ ರೋಜಾ ಮಠದ ಸ್ವಾಮೀಜಿ ಮಲ್ಲಿಕಾರ್ಜುನ ಮುತ್ಯಾಗೆ ಬಂಧನದ ಭೀತಿ ಎದುರಾಗಿದ್ದು, ಆತನನ್ನು ಪೊಲೀಸರು ಯಾವುದೇ ಕ್ಷಣದಲ್ಲಿ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ. ಈ ಕುರಿತು ಗೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

