ಸುದ್ದಿ

ನಾಯಂಡಹಳ್ಳಿ ಮೇಲ್ಸೇತುವೆ ಮೇಲಿಂಧ ಬಿದ್ದು ಯುವಕ ಆತ್ಮಹತ್ಯೆ

Share It

ಬೆಂಗಳೂರು :
ಮೇಲ್ಸೇತುವೆ ಮೇಲಿಂದ ಜಿಗಿದು ವ್ಯಕ್ತಿಯೊಬ್ಬ ಪ್ರಾಣ ಕಳೆದುಕೊಂಡ ಘಟನೆ ಇಂದು ಬೆಳಗ್ಗೆ ನಾಯಂಡಹಳ್ಳಿಯಲ್ಲಿ ನಡೆದಿದೆ. ನವೀನ್ (32) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಕೆಪಿಟಿಸಿಎಲ್​​ನಲ್ಲಿ ಕೆಲಸ ಮಾಡುತ್ತಿದ್ದ ನವೀನ್, ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಕೆಲಸಕ್ಕೆಂದು ಮನೆಯಿಂದ ಹೊರಟಿದ್ದ. ತನ್ನ ಸ್ಕೂಟರ್ ಅ​ನ್ನು ನಾಯಂಡಹಳ್ಳಿ ಮೇಲ್ಸೇತುವೆ ಮೇಲೆ ನಿಲ್ಲಿಸಿದ್ದಾನೆ. ಬಳಿಕ ಮೇಲ್ಸೇತುವೆ ಮೇಲಿನಿಂದ ಜಿಗಿದಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಮೃತ ನವೀನ್ ಯಾದವ್ ಕೆಂಗೇರಿ ಉಪನಗರದ ನಿವಾಸಿಯಾಗಿದ್ದು, ಕಳೆದ ನವೆಂಬರ್‌ನಲ್ಲಿ ಮದುವೆಯಾಗಿತ್ತು. ಮೂರು ತಿಂಗಳ ಹಿಂದಷ್ಟೆ ಕೆಪಿಟಿಸಿಎಲ್​​ನಲ್ಲಿ ಗುತ್ತಿಗೆ ಆಧಾರದ ಕೆಲಸ ಸಿಕ್ಕಿತ್ತು. ಮೇಲ್ನೋಟಕ್ಕೆ ಕೌಟುಂಬಿಕ ಜಗಳದಿಂದ ಬೇಸತ್ತು ಈ ನಿರ್ಧಾರಕ್ಕೆ ಮುಂದಾಗಿರಬಹುದು ಎಂದು‌ ಶಂಕಿಸಲಾಗಿದೆ.

ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ


Share It

You cannot copy content of this page