ಮಂಡ್ಯ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಮಂಡ್ಯ ಶಾಸಕರಾದ ರವಿಕುಮಾರ್ ಗೌಡ ಅವರೊಂದಿಗೆ ಪಂಚಾಯತಿ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಸಿ ಮತಯಾಚಿಸಿದರು.
ಚಿಕ್ಕ ಮಂಡ್ಯದ ಶ್ರೀ ಸಿದ್ಧಿ ವಿನಾಯಕ, ಶ್ರೀ ಹಳ್ಳಿಕೇಶ್ವರ ಸ್ವಾಮಿ, ಶ್ರೀ ಬೋರೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಪ್ರಚಾರ ಆರಂಭಿಸಿದರು. ನೂರಾರು ಕಾಂಗ್ರೆಸ್ ಕಾರ್ಯಕರ್ತರು ಬೈಕ್ ರ್ಯಾಲಿ ಮೂಲಕ ಮತದಾರರ ಗಮನಸೆಳೆದರು.
ಪ್ರಚಾರದ ಸಂದರ್ಭದಲ್ಲಿ ಮನ್ ಮೂಲ್ ನಿರ್ದೇಶಕ ಉಮ್ಮಡಹಳ್ಳಿ ಶಿವಪ್ಪ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಯೋಗೇಶ್, ಕೆಪಿಸಿಸಿ ಜಿಲ್ಲಾ ಕಾರ್ಯದರ್ಶಿ ಚಿದಂಬರಂ, ಕಾಂಗ್ರೆಸ್ ಮುಖಂಡ ಕಿಲಾರ ರಾಧಾಕೃಷ್ಣ, ಮಂಡ್ಯ ಜಿಲ್ಲಾ ಕಾಂಗ್ರೆಸ್ ಮಹಿಳಾ ಅಧ್ಯಕ್ಷ ಅಂಜನಾ ಶ್ರೀಕಾಂತ್ ಸೇರಿದಂತೆ ಹಲವರು ಜೊತೆಯಲ್ಲಿದ್ದರು.