ಬೆಂಗಳೂರು: ಹಿಂದಿನಿAದ ಬಂದ ಟಿಪ್ಪರ್‌ವೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಮೈಸೂರು ರಸ್ತೆಯಲ್ಲಿ ನಡೆದಿದೆ.
ಮೈಸೂರು ರಸ್ತೆಯ ರಾಜರಾಜೇಶ್ವರಿ ನಗರ ಮೆಡಿಕಲ್ ಕಾಲೇಜು ಮುಂಭಾಗದಲ್ಲಿ ಘಟನೆ ನಡೆದಿದ್ದು, ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ಕೃತಿಕಾ (೨೧) ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಆಕೆಯ ಜತೆಯಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿಗೆ ಗಂಭೀರವಾಗಿ ಗಾಯಗಳಾಗಿದ್ದು, ಆಕೆಯನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಟಿಪ್ಪರ್ ಚಾಲಕನ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಗೊತ್ತಾಗಿದ್ದು, ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಚಾಲಕ ಮತ್ತು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ವಿದ್ಯಾರ್ಥಿನಿಯ ಪೋಷಕರ ಆಕ್ರಂಧನ ಮುಗಿಲುಮುಟ್ಟಿದೆ.

