ನೆಲಮಂಗಲ:
ಓವರ್ ಟೇಕ್ ಮಾಡಿದ ವಿಚಾರಕ್ಕೆ ಜಗಳ ತೆಗೆದು, ಟಾಟಾ ಏಸ್ ಚಾಲಕನೊಬ್ಬ ಕೆಎಸ್‌ಆರ್‌ಟಿಸಿ ಚಾಲಕನಿಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ.
ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಬಳಿ ರಾಷ್ಟಿçÃಯ ಹೆದ್ದಾರಿಯಲ್ಲಿ ಕೊಪ್ಪಳದಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಟಾಟಾ ಏಸ್ ವಾಹನವನ್ನು ಓವರ್ ಟೇಕ್ ಮಾಡಿದೆ. ಈ ವಿಚಾರಕ್ಕೆ ಖ್ಯಾತೆ ತೆಗೆದ ಟಾಟಾ ಏಸ್ ಚಾಲಕ ಭಾಸ್ಕರ್ ರೆಡ್ಡಿ, ಕೆಎಸ್‌ಆರ್‌ಟಿಸಿ ಡ್ರೆöÊವರ್ ಶಿವಪ್ಪ ಜತೆಗೆ ಜಗಳ ತೆಗೆದಿದ್ದಾನೆ. ಜಗಳ ವಿಕೋಪಕ್ಕೆ ಹೋಗಿ, ತನ್ನ ವಾಹನದಲ್ಲಿ ಇಟ್ಟುಕೊಂಡಿದ್ದ ಚಾಕುವನ್ನು ತೆಗೆದು ಚಾಲಕ ಶಿವಪ್ಪನಿಗೆ ಇರಿದಿದ್ದಾನೆ.
ಘಟನೆ ನಡೆಯುತ್ತಿದ್ದಂತೆ ವಾಹನದಲ್ಲಿದ್ದ ಪ್ರಯಾಣಿಕರು ಮತ್ತು ಸಾರ್ವಜನಿಕರು, ಆರೋಪಿಯನ್ನು ಸುತ್ತಗಟ್ಟಿ ಹಿಡಿದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ಸ್ಥಳಕ್ಕೆ ಆಗಮಿಸಿದ ದಾಬಸ್ ಪೇಟೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಗಾಯಗೊಂಡಿರುವ ಕೆಎಸ್‌ಆರ್‌ಟಿಸಿ ಚಾಲಕ ಶಿವಪ್ಪ ಅವರನ್ನು ತುಮಕೂರಿನ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.