ಗದಗ: ಶಾಸಕ ಚಂದ್ರು ಲಮಾಣಿ ಮತ್ತು ಅವರ ಇಬ್ಬರು ಪಿಎಗಳ ಮನೆಗಳ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯ ಶಿರಹಟ್ಟಿ ಬಿಜೆಪಿ ಶಾಸಕರಾದ ಚಂದ್ರು ಲಮಾಣಿ ಹಾಗೂ ಅವರ ಪಿಎಗಳಾದ ಮಂಜುನಾಥ್ ಮತ್ತು ಗುರು ಲಮಾಣಿ ಎಂಬುವವರ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಅನಂತರ ಅವರನ್ನು ಬಂಧಿಸಿದ್ದು ವಿಚಾರಣೆ ಕೈಗೊಂಡಿದ್ದಾರೆ.
ಗದಗ ಜಿಲ್ಲೆಯ ಗುತ್ತಿಗೆದಾರರಿಂದ ಸಣ್ಣ ನೀರಾವರಿ ಕಾಮಗಾರಿ ಗುತ್ತಿಗೆ ನೀಡಲು ವಿಜಯ್ ಎಂಬುವವರಿಂದ ಐದು ಲಕ್ಷ ರು. ಕಮೀಷನ್ ಪಡೆಯುವ ಸಂದರ್ಭದಲ್ಲಿ ಎಸ್‌ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ. ರಸ್ತೆ ಬದಿಯ ತಡೆಗೋಡೆ ನಿರ್ಮಾಣ ಕಾಮಗಾರಿಗೆ 11 ಲಕ್ಷ ರು. ಲಂಚಕ್ಕೆ ಬೇಡಿಯಿಟ್ಟಿದ್ದರು ಎಂಬ ದೂರಿನ ಅನ್ವಯ ಅವರನ್ನು ಬಂಧಿಸಲಾಗಿದೆ.

