ಅಪರಾಧ ಸುದ್ದಿ

ಮಣಿಪುರದಲ್ಲಿ ಮತ್ತೇ ಹಿಂಸಾಚಾರ: ಐದು ದಿನ ಇಂಟರ್ನೆಟ್ ಸೇವೆ ಸ್ಥಗಿತ

Share It

ಮಣಿಪುರ: ಮಣಿಪುರದಲ್ಲಿ ಮತ್ತೇ ಹಿಂಸಾಚಾರ ಭುಗಿಲೆದ್ದಿದ್ದು, ಸರಕಾರ ಐದು ದಿನಗಳ ಕಾಲ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ.

ಕಳೆದ ಆರೇಳು ತಿಂಗಳಿಂದ ಮಣಿಪುರದಲ್ಲಿ ಗಲಭೆ ಏರ್ಪಟ್ಟಿತ್ತು. ಹೀಗಾಗಿ, ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಏರಲಾಗಿತ್ತು. ಇದೀಗ ರಾಷ್ಟ್ರಪತಿ ಆಡಳಿತ ಹಿಂಪಡೆದು ಬಿಜೆಪಿ ಸರಕಾರ ಆಡಳಿತ ನಡೆಸುತ್ತಿತ್ತು.

ಇದೀಗ ಹಿಂದೆ ಪ್ರತಿಭಟನೆ ನಡೆಸುತ್ತಿದ್ದ ಸಂಘಟನೆಗಳಿಂದ ಮತ್ತೇ ಹೋರಾಟ ಆರಂಭವಾಗಿದ್ದು, ಗಲಾಟೆ ಹೆಚ್ಚಾಗತೊಡಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವ್ಯಾಪಕ ಭದ್ರತೆ ಹೆಚ್ಚಿಸಲಾಗಿದೆ. ಮುಂಜಾಗ್ರತಾ ಕ್ರವಾಗಿ ಇಂಟೆರ್ನೆಟ್ ಬಂದ್ ಮಾಡಲಾಗಿದೆ.

ಮಣಿಪುರದಲ್ಲಿ ಗಲಭೆ ನಡೆಯುವ ಸಂದರ್ಭದಲ್ಲಿ ಅಲ್ಲಿಗೆ ಭೇಟಿ ನೀಡಲಿಲ್ಲ ಎಂಬ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕರು ಕಿಡಿಕಾರಿದ್ದರು. ಇದೀಗ ಮಣಿಪುರದಲ್ಲಿ ಮತ್ತೇ ಹಿಂಸಾಚಾರ ನಡೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.


Share It

You cannot copy content of this page