ಬೆಳಗಾವಿ: ನ್ಯಾಯಾಲಯದ ಆವರಣದಲ್ಲೇ ಅತ್ತೆ ಮತ್ತು ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ನ್ಯಾಯಾಲಯದಲ್ಲಿ ನಡೆದಿದೆ.
ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಆರೋಪಿ ಮುತ್ತಪ್ಪ ಮತ್ತು ಆತನ ಪತ್ನಿ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ಆತ ಮಚ್ಚಿನಿಂದ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಈ ವೇಳೆ ಆಕೆಯ ರಕ್ಷಣೆಗೆ ಬಂದ ಆಕೆಯ ತಾಯಿಯನ್ನು ಮಚ್ಚಿನಿಂದ ಕೊಚ್ಚಿದ್ದಾನೆ.
ತಕ್ಷಣವೇ ಪೊಲೀಸರು ಆಗಮಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಧಾರವಾಡದ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.