ಮಗನ ತಪ್ಪಿಗೆ ತಾಯಿಗೆ ಶಿಕ್ಷೆ: ಅಮಾನವೀಯ ಘಟನೆಗೆ ಆಕ್ರೋಶ
ಬೆಂಗಳೂರು: ಮಗ ಮಾಡಿದ ತಪ್ಪಿಗೆ ಹೆತ್ತ ತಾಯಿಗೆ ಅಮಾನವೀಯ ಶಿಕ್ಷೆ ನೀಡಿದ ಘಟನೆ ಪಂಜಾಬ್ನ ತನರ್್ ತರನ್ ಜಿಲ್ಲೆಯಲ್ಲಿ ನಡೆದಿದೆ.
ಯುವತಿಯೊಂದಿಗೆ ಪ್ರೀತಿ ಬೆಳೆಸಿದ್ದ ಯುವಕನೊಬ್ಬ ಓಡಿ ಹೋಗಿ ಮದುವೆ ಮಾಡಿಕೊಂಡಿದ್ದ. ಈ ಕಾರಣಕ್ಕೆ ಆತನ 55 ವರ್ಷದ ತಾಯಿ ಮೇಲೆ ಹಲ್ಲೆ ನಡೆಸಿದ ಹುಡುಗಿಯ ಹೆತ್ತವರು, ಆಕೆಯನ್ನು ಅರೆಬೆತ್ತಲೆ ಮೆರವಣಿಗೆ ನಡೆಸಿರುವ ಅಮಾನವೀಯ ಇದಾಗಿದೆ.
ಕೆಲ ದಿನಗಳ ಸಂತ್ರಸ್ತೆಯ ಮಗ ಯುವತಿಯೊಬ್ಬಳ ಜೊತೆಗೆ ಓಡಿಹೋಗಿದ್ದ. ಯುವತಿಯ ಕುಟುಂಬಸ್ಥರ ವಿರೋಧದ ನಡುವೆ ಆಕೆಯನ್ನು ಮದುವೆಯಾಗಿದ್ದ. ಆದ್ದರಿಂದ ಯುವತಿ ಕುಟುಂಬ ಸದಸ್ಯರು ಮಾಚರ್್ 31ರಂದು ಯುವಕನ ತಾಯಿಯ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲದೇ, ಗ್ರಾಮದಲ್ಲಿ ಅರೆಬೆತ್ತಲೆಯಾಗಿ ಮೆರವಣಿಗೆ ಮಾಡಿದ್ದಾರೆ. ಈ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಸಂತ್ರಸ್ತೆ ತನ್ನ ಮನೆಯಲ್ಲಿ ಒಬ್ಬಳೇ ಇದ್ದಾಗ ಆಕೆಯ ಮಗನ ಅತ್ತೆ-ಮಾವನ ಕಡೆಯವರು ಹಲ್ಲೆ ನಡೆಸಿದ್ದಾರೆ. ಇಷ್ಟೇ ಅಲ್ಲ, ಆಕೆಯನ್ನು ಅರೆಬೆತ್ತಲೆ ಸ್ಥಿತಿಯಲ್ಲಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ. ಸಂತ್ರಸ್ತೆಯನ್ನು ಮೆರವಣಿಗೆ ನಡೆಸುತ್ತಿರುವ ವಿಡಿಯೋ ಶುಕ್ರವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಒಟ್ಟಾರೆ ಐವರು ಆರೋಪಿಗಳ ಪೈಕಿ ನಾಲ್ವರನ್ನು ಶನಿವಾರ ಬಂದಿಸಿದ್ದಾರೆ.
ಯುವತಿ ತಾಯಿ ಕುಲ್ವಿಂದರ್ ಕೌರ್ ಮಣಿ, ಆಕೆಯ ಸಹೋದರರಾದ ಶರಣಜಿತ್ ಸಿಂಗ್ ಶಾನಿ ಮತ್ತು ಗುರುಚರಣ್ ಸಿಂಗ್ ಮತ್ತು ಕುಟುಂಬದ ಸ್ನೇಹಿತ ಸನ್ನಿ ಸಿಂಗ್ ಎಂಬುವರನ್ನು ಬಂಧಿಸಲಾಗಿದೆ. ಈಗಾಗಲೇ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮೆರವಣಿಗೆಯ ವಿಡಿಯೋ ಮಾಡಲು ಬಳಸಲಾದ ಮೊಬೈಲ್ ಫೋನ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ಐದನೇ ಆರೋಪಿಯನ್ನು ಬಂಧಿಸಲು ಪ್ರಯತ್ನಿಸಲಾಗುತ್ತಿದೆ. ಸದ್ಯ ಏಪ್ರಿಲ್ 3ರಂದು ಎಫ್ಐಆರ್ ದಾಖಲಿಸಲಾಗಿದೆ.