ಬೆಂಗಳೂರು:ಬಾಲಿವುಡ್ನ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರ ನಿಧನದ ಸುದ್ದಿ ಮನಸ್ಸಿಗೆ ಅತ್ಯಂತ ನೋವಿನ ಸಂಗತಿಯಾಗಿದೆ. ತಮ್ಮ ಸುಮಧುರ ಕಂಠದಿಂದ ಅನೇಕ ದಶಕಗಳ ಕಾಲ ಸಂಗೀತ ಪ್ರಿಯರ ಮನಸ್ಸುಗಳನ್ನು ಗೆದ್ದ ಅವರು, ಹಾಡಿದ ನೂರಾರು ಅಮರ ಗೀತೆಗಳು ಸದಾ ನಮ್ಮ ನೆನಪಿನಲ್ಲಿ ಉಳಿಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ
ಈ ಕುರಿತು ಎಕ್ಸ್ ಮಾಡಿರುವ ಅವರು, ಸುಮಾರು 20ಕ್ಕೂ ಹೆಚ್ಚು ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡಿ, ಭಾರತೀಯ ಸಂಗೀತ ಲೋಕಕ್ಕೆ ಅಪಾರ ಕೊಡುಗೆ ನೀಡಿದ ಅವರು, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸೇರಿದಂತೆ ಅನೇಕ ಪ್ರತಿಷ್ಠಿತ ಗೌರವಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಅವರ ಅಗಲಿಕೆಯಿಂದ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದ್ದು, ಇಡೀ ವಿಶ್ವವೇ ಒಬ್ಬ ಮಹಾನ್ ಕಲಾವಿದೆಯನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರು ಮತ್ತು ಕೋಟ್ಯಂತರ ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

