ರಾಜಕೀಯ ಸುದ್ದಿ

ಬೌಧ್ಧ ಸಂಪ್ರದಾಯದಂತೆ ಶ್ರೀನಿವಾಸ್ ಪ್ರಸಾದ್ ಅಂತ್ಯಕ್ರಿಯೆ

Share It

ಮೈಸೂರು: ಹಿರಿಯ ದಲಿತ ನಾಯಕ, ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರ ಅಂತ್ಯಕ್ರಿಯೆ ಬೌದ್ಧ ಧರ್ಮದ ವಿಧಿ ವಿಧಾನದಂತೆ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಹೆಚ್​.ಡಿ. ಕೋಟೆ ರಸ್ತೆಯ ಸಿಲ್ಕ್ ಫ್ಯಾಕ್ಟರಿ ಬಳಿಯ ಡಾ.ಅಂಬೇಡ್ಕರ್​ ಟ್ರಸ್ಟ್​ ಆವರಣದಲ್ಲಿ ನಡೆಯಲಿದೆ.

ಭಾನುವಾರ ತಡರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಸಂಸದ ಶ್ರೀನಿವಾಸ ಪ್ರಸಾದ್ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಮೈಸೂರಿಗೆ ತರಲಾಗಿದ್ದು. ಇಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಮೈಸೂರಿನ ಜಯಲಕ್ಷ್ಮಿಪುರಂನ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಮನೆ ಭೀಮ ಸದನದಲ್ಲಿ ಸೋಮವಾರ ಬೆಳಗ್ಗೆ 8.30 ರಿಂದ 1 ಗಂಟೆಯವರೆಗೆ ಕುಟುಂಬಸ್ಥರ ಹಾಗೂ ಕೆಲವು ಪ್ರಮುಖ ನಾಯಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ 1 ಗಂಟೆಯಿಂದ ಮಂಗಳವಾರ 1 ಗಂಟೆಯವರೆಗೆ ಅಶೋಕ್ ಪುರಂನ NTM ಶಾಲೆಯ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಹೆಚ್​ಡಿ ಕೋಟೆ ರಸ್ತೆಯಲ್ಲಿರುವ ಸಿಲ್ಕ್ ಫ್ಯಾಕ್ಟರಿ ಬಳಿಯ ಡಾ.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲಾಗಿದೆ. ಬೌದ್ಧ ಧರ್ಮದ ವಿಧಿ ವಿಧಾನದಂತೆ ಅಂತ್ಯಕ್ರಿಯೆ ನಡೆಸಲಾಗುವುದು. ನಮ್ಮ ತಂದೆ ಶ್ರೀನಿವಾಸ ಪ್ರಸಾದ್ ಬೌದ್ಧಧರ್ಮದ ಅನುಯಾಯಿ ಆಗಿದ್ದರು ಎಂದು ಅಂತ್ಯಕ್ರಿಯೆ ವಿಧಿ ವಿಧಾನದ ಬಗ್ಗೆ ಮಗಳು ಪ್ರತಿಮಾ ಪ್ರಸಾದ್ ಮಾಹಿತಿ ನೀಡಿದ್ದಾರೆ.

ಸಂಜೆ ಸಿಎಂ ಸಿದ್ದರಾಮಯ್ಯ ಅವರಿಂದ ಅಂತಿಮ ದರ್ಶನ: ಜಯಲಕ್ಷ್ಮಿಪುರಂ ನಿವಾಸಕ್ಕೆ ಆಗಮಿಸಿ ಸಿಎಂ ಸಿದ್ದರಾಮಯ್ಯ, ಶ್ರೀನಿವಾಸ್ ಪ್ರಸಾದ್ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ. ಚಾಮರಾಜ ನಗರದ ಶಾಸಕ ಪುಟ್ಟರಂಗಶೆಟ್ಟಿ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ, ಸುತ್ತೂರು ಶ್ರೀಗಳು, ಸಾಹಿತಿ ದೇವನೂರು ಮಹಾದೇವ, ಎಂಎಲ್ಸಿ ಹೆಚ್​. ವಿಶ್ವನಾಥ್ ಸೇರಿ ಹಲವು ಗಣ್ಯರು ಅಂತಿಮ ದರ್ಶನ ಪಡೆದರು.


Share It

You cannot copy content of this page