ಅಪರಾಧ ಸಿನಿಮಾ ಸುದ್ದಿ

ದರ್ಶನ್ ಮತ್ತು ಗ್ಯಾಂಗ್‌ನಿಂದ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಅ.14ಕ್ಕೆ ನಿಗದಿಗೊಳಿಸಿದ ಸುಪ್ರೀಂ

Waqf Act: Petitions filed in Supreme Court challenging its validity; hearing likely on 16th
Share It

ನವದೆಹಲಿ: ದರ್ಶನ್ ಮತ್ತು ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಪ್ರಶ್ನಿಸಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದಿನ ವಾರಕ್ಕೆ ಮುಂದೂಡಿದೆ.

ದರ್ಶನ್ ಪ್ರಕರಣದಲ್ಲಿ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಿದ್ದು, ಈಗಾಗಲೇ ನ್ಯಾಯಾಲಯ ಮಾಫಿ ಸಾಕ್ಷಿ ದಾಖಲು ಮಾಡಿಕೊಂಡಿದೆ. ಕೆಳಹಂತದ ನ್ಯಾಯಾಲಯಗಳು ಮಾಫಿ ಸಾಕ್ಷಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆಗೆ ಅನುಮತಿ ನೀಡಿದ್ದ ನ್ಯಾಯಾಲಯ ಇಂದು ವಿಚಾರಣೆ ನಡೆಸಿ, ಮುಂದಿನ ವಾರಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದೆ. ಕೆಳಹಂತದ ನ್ಯಾಯಾಲಯಗಳ ತೀರ್ಪುಗಳನ್ನು ಪರಿಶೀಲಿಸಿ, ನಂತರ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದ ಸುಪ್ರೀಂ ಕೋರ್ಟ್, 14ಕ್ಕೆ ವಿಚಾರಣೆ ನಿಗದಿಗೊಳಿಸಿದೆ.


Share It

You cannot copy content of this page