ಚಿತ್ರದುರ್ಗ : ಫೋಕ್ಸೋ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಅವರಿಗೆ 4 ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕೋರ್ಟ್ ಆದೇಶಿಸಿದ್ದು, ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚನೆ ನೀಡಿದೆ.
ಜೊತೆಗೆ ವಿಶೇಷ ಕೋರ್ಟ್ನಲ್ಲಿ ಸಂತ್ರಸ್ತ ಮಕ್ಕಳ ವಿಚಾರಣೆಗೆ ‘ಸುಪ್ರೀಂ’ ಆದೇಶಿಸಿದೆ. ಇನ್ನು 4 ತಿಂಗಳಲ್ಲಿ ತನಿಖೆ ಪೂರ್ಣಗೊಳ್ಳದಿದ್ದರೆ ಬಂಧನದ ಅವಧಿಯನ್ನು ಇನ್ನೆರಡು ತಿಂಗಳ ಕಾಲ ವಿಸ್ತರಣೆ ಮಾಡಬಹುದು ಎಂದು ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.