ಬೆಂಗಳೂರು: ಶಾಂತಿನಗರ ಶಾಸಕ ಎನ್.ಎ ಹ್ಯಾರೀಸ್ ಅವರಿಗೆ ಸಚಿವ ಸ್ಥಾನ ಮಿಸ್ ಆಗಿದ್ದಕ್ಕೆ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದು, ಪೊಲೀಸರು ಕೆಲವರನ್ನು ಬಂಧಿಸಿದ್ದಾರೆ.
ಬ್ರಿಗೇಡ್ ರಸ್ತೆಯ ವಾರ್ ಮೆಮೋರಿಯಲ್ ಬಳಿ ಜಮಾಯಿಸಿದ್ದ ಹ್ಯಾರೀಸ್ ಬೆಂಬಲಿಗರು ಸರಕಾರದ ವಿರುದ್ಧ ಘೋಷಣೆ ಕೂಗಿ, ಸಿಎಂ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಘೋಷಣೆ ಕೂಗುವ ಮೂಲಕ ಪ್ರತಿಭಟನೆ ನಡೆಸಿದರು.
ಅನಂತರ ರಸ್ತೆ ತಡೆದು ಪ್ರತಿಭಟನೆ ನಡೆಸಲು ಮುಂಧಾಗುತ್ತಿದ್ದು, ಪೊಲೀಸರು ಅವರನ್ನು ತಡೆದರು. ಈ ವೇಳೆ ಕಾರ್ಯಕರ್ತರು ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ನಂತರ ಕೆಲವರನ್ನು ಬಂಧಿಸಿ ಕರೆದೊಯ್ಯಲಾಯಿತು.

