ನವಲಗುಂದ : ಸುತ್ತಮುತ್ತಲಿನ ವಾತಾವರಣ ಶುಚಿಯಾಗಿ ಇಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ, ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಪುರಸಭೆ ಮತ್ತು ಪಂಚಾಯಿತಿಗಳು ಮುಂಜಾಗ್ರತೆ ಕ್ರಮವಾಗಿ ಫಾಗಿಂಗ್ ಸಿಂಪಡನೆ ಕಾರ್ಯ ನಡೆಸಿದ್ದು ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಬೇಕು ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು.
ಅವರು ಪಟ್ಟಣದ ಶ್ರೀ ಶಂಕರ ಕಲಾ ಮಹಾವಿದ್ಯಾಲಯದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಳ್ಳಲಾದ ಡೆಂಗಿ ಜ್ವರ ನಿಯಂತ್ರಣ ಅರಿವು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ವೇಳೆ ತಹಶೀಲ್ದಾರ ಸುಧೀರ ಸಾಹುಕಾರ, ತಾಪಂ ಇಓ ಭ್ಯಾಗಶ್ರಿ ಜಾಹಗೀರದಾರ, ಆಡಳಿತ ವೈದ್ಯಾಧಿಕಾರಿಗಳಾದ ಡಾ.ಅವಿನಾಶ ಎಸ್.ಜಿ, ಬಿಇಒ ಶಿವಾನಂದ ಮಲ್ಲಾಡ, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾಗನೂರು ಸೇರಿದಂತೆ ಅನೇಕರು ಇದ್ದರು.

