ಉಪಯುಕ್ತ ಸುದ್ದಿ

ನವಲಗುಂದ : ಜಿಲ್ಲಾಡಳಿತದಿಂದ ಜನಸ್ಪಂದನ ಕಾರ್ಯಕ್ರಮ

Share It

ನವಲಗುಂದ : ವಿಧಾನಸಭಾ ಕ್ಷೇತ್ರದಲ್ಲಿ ಪರಿಹಾರದ ಸಮಸ್ಯೆಯಾಗಿದ್ದು ಜಿಲ್ಲಾಧಿಕಾರಿಗಳು ಸ್ವಲ್ಪ ಮುತುವರ್ಜಿ ವಹಿಸಿ ರೈತರಿಗೆ ಕೂಡಲೇ ಪರಿಹಾರವನ್ನು ಒದಗಿಸುವ ಕೆಲಸವಾಗಲಿ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಅವರಲ್ಲಿ ಶಾಸಕ ಎನ್.ಎಚ್. ಕೋನರಡ್ಡಿ ಮನವಿ ಮಾಡಿದರು.

ಪಟ್ಟಣದ ಶಿಕ್ಷಕರ ಸಹಕಾರಿ ಕಲ್ಯಾಣ ಕೇಂದ್ರದಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಂಡ ಜನಸ್ಪಂದನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಸಾಮಾನ್ಯ ಕೆಲಸಕ್ಕೂ ಜನರು ಅಲೆದಾಡುವ ಪರಿಸ್ಥಿತಿಯಾಗಬಾರದು ಸಾರ್ವಜನಿಕರು ಒಂದು ಅರ್ಜಿ ಕೊಟ್ಟರೆ ಅಧಿಕಾರಿಗಳು ಕಾಲಮಿತಿ ಹಾಕಿಕೊಂಡು ಕ್ರಮಬದ್ಧವಾಗಿ ಕೆಲಸ ಮಾಡಿದರೆ ಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸಬಹುದು ಎಂದರು.

ಕಾರ್ಯಕ್ರಮ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ ಶಾಸಕ ಎನ್. ಎಚ್. ಕೋನರಡ್ಡಿ ಸಸಿಗೆ ನೀರುಣಿಸುವ ಮೂಲಕ ನೆರವೇರಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ, ನವಲಗುಂದ ತಹಸೀಲ್ದಾರ್ ಮಲ್ಲಿಕಾರ್ಜುನ ಸಾಹುಕಾರ್ ಸೇರಿ ಜಿಲ್ಲಾ ಹಾಗೂ ತಾಲ್ಲೂಕಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


Share It

You cannot copy content of this page