ಸುದ್ದಿ

ನೂತನ ಬಸ್ ನಿಲ್ದಾಣದಿಂದ ಸಾರಿಗೆ ವಾಹನಗಳಿಗೆ ಚಾಲನೆ : ಡಾ. ಜಿ ಪರಮೇಶ್ವರ್

Share It

ತುಮಕೂರು : ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ೩೯೮೧೭ ಚ.ಮೀ. ಪ್ರದೇಶದಲ್ಲಿ ಅಂದಾಜು ೮೨.೮೯ ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಡಿ.ದೇವರಾಜ ಅರಸು ಬಸ್ ನಿಲ್ದಾಣದಿಂದ ಸಾರಿಗೆ ವಾಹನಗಳ ಕಾರ್ಯಾಚರಣೆಗೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಇಂದು ಚಾಲನೆ ನೀಡಿದರು.

ಚಾಲನೆ ನೀಡಿದ ನಂತರ ತಡೆರಹಿತ ತುಮಕೂರು-ಬೆಂಗಳೂರು ಮಾರ್ಗದ ೬ ಅಶ್ವಮೇಧ ಬಸ್ಸುಗಳಿಗೆ ಚಾಲನೆ ನೀಡಿ ಸ್ವಲ್ಪ ದೂರ ಪ್ರಯಾಣಿಸಿ ಪ್ರಾಯೋಗಿಕವಾಗಿ ಪರಿಶೀಲನೆ ಮಾಡಿದರು.ಈ ಸಂದರ್ಭದಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರ ಎಸ್.ಚಂದ್ರಶೇಖರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಸಚಿವರು ನೂತನ ಬಸ್ ನಿಲ್ದಾಣದ ಕಾರ್ಯಾಚರಣೆ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾಹಿತಿ ಹಂಚಿಕೊಳ್ಳುತ್ತಾ, ಮಾರ್ಚ್ ೨೯ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಈಗಾಗಲೇ ಬಸ್ ನಿಲ್ದಾಣವನ್ನು ಉದ್ಘಾಟಿಸಿದ್ದು, ಬಾಕಿಯಿದ್ದ ಸಣ್ಣ-ಪುಟ್ಟ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಿ ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿನಿಂದ
ಬಸ್‌ಗಳ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ.


Share It

You cannot copy content of this page